spot_img
Monday, June 1, 2026
spot_img

ಗಂಗೊಳ್ಳಿ :ಶಿಶು ಮಂದಿರ ಪ್ರಾರಂಭೋತ್ಸವ ಕಾರ್ಯಕ್ರಮ

ಗಂಗೊಳ್ಳಿ : ಕಳೆದ 39 ವರ್ಷಗಳಿಂದ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಪುಟಾಣಿಗಳಲ್ಲಿ ಭಾರತೀಯ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರಗಳನ್ನು ಬೆಳೆಸುವ ಉದ್ದೇಶದಿಂದ ಮಕ್ಕಳ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ನೀಡುತ್ತಿದೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ರೀತಿಯ ಚ್ಯುತಿ ಬಾರದಂತೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಶು ಮಂದಿರ ಶ್ರಮಿಸಲಿದೆ ಎಂದು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಸಂಚಾಲಕ ಡಾ.ಕಾಶೀನಾಥ ಪೈ ಹೇಳಿದರು.
ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾಭವನದಲ್ಲಿ ಸೋಮವಾರ ಜರಗಿದ 2026-27ನೇ ಸಾಲಿನ ಶಿಶು ಮಂದಿರ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ಶಿಶು ಮಂದಿರದ ಅಧ್ಯಕ್ಷ ಬಿ.ರಾಘವೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಶಿಶು ಮಂದಿರಕ್ಕೆ ಆಗಮಿಸಿದ ಪುಟಾಣಿಗಳ ಕಾಲುಗಳನ್ನು ತೊಳೆದು, ಕುಂಕುಮದ ತಿಲಕವನ್ನಿಟ್ಟು, ಆರತಿ ಬೆಳಗಿ ಸಂಪ್ರದಾಯ ಬದ್ಧವಾಗಿ ಅದ್ದೂರಿಯಾಗಿ ಸ್ವಾಗತಿಸಿಕೊಳ್ಳಲಾಯಿತು. ಶಿಶು ಮಂದಿರದ ಸದಸ್ಯರಾದ ಶ್ರೀನಿವಾಸ ಎಂ., ಉಷಾ ಪಿ.ಮಡಿವಾಳ, ಭಾಸ್ಕರ ಎಚ್.ಜಿ., ವಸಂತಿ ಎನ್.ಖಾರ್ವಿ, ಗಾಯತ್ರಿ ಕೊಡಂಚ, ಮಾತಾಜಿ ಪ್ರೇಮಾ, ಸಹಾಯಕಿ ರತ್ನ, ಪೋಷಕರು ಮೊದಲಾದವರು ಉಪಸ್ಥಿತರಿದ್ದರು.
ಅಧ್ಯಕ್ಷ ಬಿ.ರಾಘವೇಂದ್ರ ಪೈ ಸ್ವಾಗತಿಸಿದರು. ಮಾಜಿ ಅಧ್ಯಕ್ಷೆ ಸವಿತಾ ಯು.ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!