spot_img
Monday, June 1, 2026
spot_img

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ 2 ಬಗ್ವಾಡಿ: ಶಾಲಾ ಪ್ರಾರಂಭೋತ್ಸವ

kundapura: ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ 2 ಬಗ್ವಾಡಿ ಇಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮಕ್ಕಳಿಗೆ ಬಣ್ಣ ಬಣ್ಣದ ಬಲೂನ್ ನೀಡಿ ಬ್ಯಾಂಡ್ ಸೆಟ್ ನೊಂದಿಗೆ ಮೆರವಣಿಗೆ ಮೂಲಕ ಪುಷ್ಪಾರ್ಚನೆ ಮಾಡಿ ಮಕ್ಕಳನ್ನು ಸ್ವಾಗತಿಸಲಾಯಿತು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಾಧಾಕೃಷ್ಣ ಗಾಣಿಗ ವಹಿಸಿದ್ದರು. ಸಭೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಬಿ.ರಾಜೀವ ಶೆಟ್ಟಿ, ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಯಶೋದ ಪೂಜಾರಿ, ಹಿರಿಯ ಸದಸ್ಯರಾದ ಗೋಪಾಲ ಪೂಜಾರಿ, ಪೋಷಕರು, ಎಸ್.ಡಿ.ಎಮ್.ಸಿ ಸದಸ್ಯರು, ವಿದ್ಯಾರ್ಥಿಗಳು, ಶಿಕ್ಷಕವೃಂದದವರು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯನಿ ಶೈಲಜಾ ಶೆಟ್ಟಿ ಸ್ವಾಗತಿಸಿ, ನೂತನ ಶೈಕ್ಷಣಿಕ ವರ್ಷದ ಕಾರ್ಯಕ್ರಮ ಚಟುವಟಿಕೆಗಳನ್ನು ವಿವರಿಸಿದರು. ಸರಕಾರ ನೀಡಿದ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. .ಸಹ ಶಿಕ್ಷಕಿ ಸತ್ಯವತಿ ವಂದಿಸಿದರು. ಗೌರವ ಶಿಕ್ಷಕಿ ಸ್ವಾತಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಉಷಾ, ಪೂರ್ಣಿಮಾ, ರೇಷ್ಮಾ, ಹರ್ಷಿತ, ಶ್ವೇತಾ, ಚೈತ್ರ ಉಪಸ್ಥಿತರಿದ್ದರು.

ಮಕ್ಕಳಿಗೆ ಪಾಯಸದ ಊಟವನ್ನು ಪೂರಕ ಪೌಷ್ಟಿಕ ಆಹಾರದೊಂದಿಗೆ ವಿತರಿಸಲಾಯಿತು.

ವಿಡಿಯೋ ವೀಕ್ಷಿಸಿ https://www.facebook.com/share/v/1U7aTA5cDH/

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!