spot_img
Monday, June 1, 2026
spot_img

ಕೋಟೇಶ್ವರ ಗಾಣಿಗ ಯುವ ಸಂಘಟನೆ: ವಲಯ ಸಮಾವೇಶ ಉದ್ಘಾಟನೆ

ಕೋಟ: ಸಂಘಟನೆಯ ಮೂಲಕ ಯುವ ಜನತೆ ಸಮಾಜ ಸೇವೆಯನ್ನು ನಿರಂತರವಾಗಿ ಹದಿನೈದು ವರ್ಷಗಳ ಕಾಲ ಮುನ್ನೆಡೆಸಿಕೊಂಡು ಬಂದಿರುವುದು ಸಾಧನೆಯೇ ಸರಿ. ಯುವಜನತೆ ಒಗ್ಗೂಡಿದಾಗ ಏನನ್ನು ಸಹ ಸಾಧಿಸಲು ಸಾಧ್ಯ ಎಂದು ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಕೆ.ಸತೀಶ್ ಗಾಣಿಗ ಹೇಳಿದರು.
ಅವರು ಭಾನುವಾರ ಗಾಣಿಗ ಯುವ ಸಂಘಟನೆ ಕೋಟೇಶ್ವರ ಘಟಕ ಮತ್ತು ಮಹಿಳಾ ಸಂಘಟನೆ ಕೋಟೇಶ್ವರ ಘಟಕದ ಆಶ್ರಯದಲ್ಲಿ ಕುಂದಾಪುರ ವ್ಯಾಸರಾಜ ಮಠದ ಶ್ರೀ ವೇಣುಗೋಪಾಲಕೃಷ್ಣ ಹವಾನಿಯಂತ್ರಿತ ಕಲ್ಯಾಣ ಮಂಟಪದಲ್ಲಿ ನಡೆದ ಗಾಣಿಗ ಯುವ ಸಂಘಟನೆ ಕೋಟೇಶ್ವರ ಘಟಕದ 15ನೇ ವರ್ಷದ ಪ್ರಯುಕ್ತ ವಲಯ ಸಮಾವೇಶ, ಕೋಟೇಶ್ವರ ಘಟಕ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಉಚಿತ ನೋಡ್ಸ್ ಪುಸ್ತಕ, ಕೊಡೆ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಸುರೇಂದ್ರ ಶೆಟ್ಟಿ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಗಾಣಿಗ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷ ಬಿ.ಜಿ ನಾಗರಾಜ ವಹಿಸಿದ್ದರು.
ಧಾರ್ಮಿಕ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ, ಉಡುಪಿ ಜಿಲ್ಲಾ ಸೋಮಕ್ಷತ್ರೀಯ ಗಾಣಿಗ ಸಮಾಜದ ಅಧ್ಯಕ್ಷ ಉದಯ ಕುಮಾರ್ ಶುಭಹಾರೈಸಿದರು.
ಇದೇ ಸಂದರ್ಭದಲ್ಲಿ ನಿವೃತ್ತ ಸೈನಿಕ ಕರುಣಾಕರ ಗಾಣಿಗ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಬೀಜಾಡಿ, ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಾದ ಪ್ರಥ್ವಿರಾಜ್ ಆರ್.ಗಾಣಿಗ, ಅವನಿಕ ಜಿ., ರಿಧಿಮಾ ಬಿ.ಆರ್, ಘಟಕ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ಮಾಜಿ ಸದಸ್ಯರಾದ ಲಕ್ಷ್ಮಿಗಾಣಿಗ, ಪಾರ್ವತಿ ಗಾಣಿಗ, ಶಂಕರನಾರಾಯಣ ಗಾಣಿಗ, ಪ್ರಭಾವತಿ ಗಾಣಿಗ, ಜಯಂತಿ ಗಾಣಿಗ, ಮಂಜುಳಾ ಗಾಣಿಗ, ಪ್ರಭಾಕರ ಬಿ.ಕುಂಭಾಶಿ, ಹರೀಶ್ ಗಾಣಿಗ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಮಹಿಳಾ ಸಂಘಟನೆಯ ಅಧ್ಯಕ್ಷೆ ಸವಿತಾ ಗಾಣಿಗ ಉಪಸ್ಥಿತರಿದ್ದರು. ಮಂಜುನಾಥ್ ಕೆ.ಎಸ್ ಸ್ವಾಗತಿಸಿದರು. ಕಲಾವತಿ ಗಾಣಿಗ ಪ್ರಾರ್ಥಿಸಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಣೂತ್ ಗಾಣಿಗ ಕಾರ್ಯಕ್ರಮ ನಿರೂಪಿಸಿದರು. ಘಟಕದ ಮಹಿಳಾ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!