spot_img
Monday, June 1, 2026
spot_img

ಬಿ.ಬಿ.ಹೆಗ್ಡೆಕಾಲೇಜು: ಕೈಗಾರಿಕಾ ಭೇಟಿ

ಕುಂದಾಪುರ (ಮೇ.23) : ಇಲ್ಲಿನ ಡಾ. ಬಿ.ಬಿ.ಹೆಗ್ಡೆ ಪ್ರಥಮದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಕಾಮರ್ಸ್ ಮ್ಯಾನೇಜ್ಮೆಂಟ್ ಮತ್ತು ಐಟಿ ಅಸೋಸಿಯೇಷನ್ ವತಿಯಿಂದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಭೇಟಿಯನ್ನು ಮೇ 23ರಂದು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳನ್ನು ಕುಂದಾಪುರದ ಕೋಸ್ಟಲ್ ಇಂಡಸ್ಟೀಸ್ ಪ್ರೆವೇಟ್ ಲಿಮಿಟೆಡ್ (ಕೋಸ್ಟಲ್ ಕ್ಯಾಶ್ಯೂಸ್) ಸಂಸ್ಥೆಗೆ ಭೇಟಿ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕರಾದ ವಿನೋದ್ ಗೋಡಂಬಿ ಬೀಜಗಳ ಸಂಸ್ಕರಣೆಯ ಸಂಪೂರ್ಣ ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳಿಗೆ ವಿವರವಾದ ಮಾಹಿತಿ ನೀಡಿದರು. ಗೋಡಂಬಿ ಬೀಜಗಳನ್ನು ಎಲ್ಲಿಂದ ಸಂಗ್ರಹಿಸಲಾಗುತ್ತದೆ, ಅವುಗಳನ್ನು ವಿವಿಧ ಹಂತಗಳ ಸಂಸ್ಕರಣೆಗೆ ಹೇಗೆ ಒಳಪಡಿಸಲಾಗುತ್ತದೆ, ಗುಣಮಟ್ಟದ ಆಧಾರದ ಮೇಲೆ ಹೇಗೆ ವಿಂಗಡಿಸಲಾಗುತ್ತದೆ ಹಾಗೂ ಅಂತಿಮವಾಗಿ ಉತ್ತಮ ಗುಣಮಟ್ಟದ ಉತ್ಪನ್ನವಾಗಿ ಹೇಗೆ ತಯಾರಿಸಲಾಗುತ್ತದೆ ಎಂಬುದನ್ನು ವಿವರಿಸಿದರು.
ಈ ಕೈಗಾರಿಕಾ ಭೇಟಿಯಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಪ್ರೀತಿ ಹೆಗ್ಡೆ, ಸತೀಶ್ ಶೆಟ್ಟಿ, ರಜತ್ ಬಂಗೇರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!