spot_img
Monday, June 1, 2026
spot_img

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ: ನೂತನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

ಕುಂದಾಪುರ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಅರ್ಥಪೂರ್ಣವಾಗಿ ನಡೆಸಲಾಯಿತು. ಶಾಲಾ ಆವರಣದಿಂದ ಪುಷ್ಪವೃಷ್ಟಿ ಸುರಿಸುವುದರ ಮೂಲಕ ಮಕ್ಕಳನ್ನು ತರಗತಿಗೆ ಸ್ವಾಗತಿಸಲಾಯಿತು.
ಬಳಿಕ ನಡೆದ ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕರ ಸಭೆ ಕಾರ್ಯಕ್ರಮವನ್ನು ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯಕುಮಾರ ಶೆಟ್ಟಿ ಉದ್ಘಾಟಿಸಿ, ವಂಡ್ಸೆ ಶಾಲೆ ಗುಣಮಟ್ಟದ ಶಿಕ್ಷಣದ ಮೂಲಕ ಪ್ರಸಿದ್ಧಿ ಪಡೆದಿದೆ. ಎ.ಐ ಶಿಕ್ಷಕಿಯನ್ನು ಕರ್ನಾಟಕ ರಾಜ್ಯದ ಸರಕಾರಿ ಶಾಲೆಯಲ್ಲಿ ಪ್ರಥಮವಾಗಿ ಪರಿಚಯಿಸುವುದರ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ರೋಬೊ ತಯಾರಿಯ ಬಗ್ಗೆ ಆನ್ ಲೈನ್ ಮೂಲಕ ಹಂತಹಂತವಾಗಿ ಭೋದಿಸುವ ಬಗ್ಗೆ ತಜ್ಞರೊಬ್ಬರು ಸ್ವ ಆಸಕ್ತಿಯಿಂದ ಮುಂದೆ ಬಂದಿದ್ದು ಶೀಘ್ರ ಇದೂ ಕೂಡಾ ಅನುಷ್ಟಾನವಾಗುತ್ತದೆ. ಈಗಾಗಲೇ ಕಿಂಡರ್ ಗಾರ್ಟನ್ ಕೂಡಾ ನಿರ್ಮಾಣವಾಗಿದೆ ಎಂದರು.
ಸರಕಾರದಿಂದ ಕೊಡಮಾಡುವ ಪಠ್ಯ ಪುಸ್ತಕ ಹಾಗೂ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಮೂಲಕ ನೀಡುವ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಖಜಾಂಚಿ ಜಿ.ಶ್ರೀಧರ ಶೆಟ್ಟಿ ಅವರು ಈ ಶಾಲೆಯಲ್ಲಿ ಪೂರ್ವ ಪ್ರಾಥಮಿಕದಿಂದ ಏಳನೇ ತರಗತಿಯ ತನಕ ಕಲಿತು ಬೇರೆ ಬೇರೆ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಪೂರೈಸಿದ ಮಕ್ಕಳು 600ಕ್ಕಿಂತ ಹೆಚ್ಚು ಅಂಕ ಪಡೆಯುತ್ತಿರುವುದು ಈ ಶಾಲೆಯ ಬುನಾದಿ ಶಿಕ್ಷಣದ ಗುಣಮಟ್ಟ ತೋರಿಸುತ್ತದೆ ಎಂದು ಅಭಿಪ್ರಾಯ ಪಟ್ಟರು.
ಎಸ್.ಡಿ.ಎಂ.ಸಿ ಉಪಾಧ್ಯಕ್ಷ ನಾಗೇಂದ್ರ ಉಡುಪ ಅಧ್ಯಕ್ಷತೆ ವಹಿಸಿದ್ದರು. ಸರಕಾರಿ ನೌಕರರ ಸಂಘದ ಪ್ರತಿನಿಧಿ ಪ್ರತಾಪ ಕುಮಾರ್ ಶೆಟ್ಟಿ, ಎಸ್.ಡಿ.ಎಂ.ಸಿ ಸದಸ್ಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಶಿಕ್ಷಕಿ ನಾಗವೇಣಿ ಸ್ವಾಗತಿಸಿದರು. ಪ್ರಭಾರ ಮುಖ್ಯಶಿಕ್ಷಕ ಸೋಮರಾಯ ಜನ್ನು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಸ್.ಡಿ.ಎಂ.ಸಿ ಸದಸ್ಯೆ ಆಶಾರಾಣಿ ಅನಿಸಿಕೆ ಹಂಚಿಕೊಂಡರು. ಶಿಕ್ಷಕ ಸುಧಾಕರ ಮರಕಾಲ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್. ಕಾರ್ಯಕ್ರಮ ನಿರ್ವಹಿಸಿದರು.
ಶಾಲಾವರಣವನ್ನು ಬಣ್ಣಬಣ್ಣದ ಬೆಲೂನುಗಳಿಂದ ಅಲಂಕರಿಸಲಾಗಿತ್ತು. ಮಧ್ಯಾಹ್ನ ಪಾಯಸದೂಟದೊಂದಿಗೆ ಸಂಭ್ರಮದಿಂದ ಈ ಶೈಕ್ಷಣಿಕ ವರ್ಷದ ಪ್ರಾರಂಭ ದಿನವನ್ನು ಸಂಭ್ರಮಿಸಲಾಯಿತು.

 

ವಿಡಿಯೋ ವೀಕ್ಷಿಸಿ https://www.facebook.com/share/v/1AzesgLZQP/

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!