spot_img
Tuesday, June 2, 2026
spot_img

ಮಣಿಪಾಲ ಜ್ಞಾನಸುಧಾ ಪ.ಪೂ.ಕಾಲೇಜು ಪ್ರಾರಂಭೋತ್ಸವ : ಅರ್ಹ ವಿದ್ಯಾರ್ಥಿಗಳಿಗೆ 29.88 ಲಕ್ಷ ರೂ.ವಿದ್ಯಾರ್ಥಿ ವೇತನವಿತರಣೆ

ಮಣಿಪಾಲ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ಈ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ದಿನಾಂಕ 28.05.2026ರಂದು ನಡೆಯಿತು. ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡಿದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ಉತ್ತಮ ಸ್ನೇಹಿತರ ಪಾತ್ರ ಮಹತ್ವವಾದುದು. ಜ್ಞಾನಸುಧಾ ಕೊಡಮಾಡುವ ಮೌಲ್ಯಯುತ ಶಿಕ್ಷಣದ ಸದ್ಬಳಕೆ ಮಾಡಿ ವಿದ್ಯಾರ್ಥಿಗಳು ಪೋಷಕರಿಗೆ ಶೈಕ್ಷಣಿಕ ಸಾಧನೆಯ ಉಡುಗೊರೆ ಕೊಡಿ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಆಗಿರುವ ಡಾ.ಮಿಥುನ್‌ಯು ಮಾತನಾಡಿ ಎರಡು ವರ್ಷಗಳ ಶೈಕ್ಷಣಿಕ ಚಟುವಟಿಕೆಗಳು ಸಾಗುವ ಬಗೆಯನ್ನು ವಿವರಿಸಿದರು. ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯ ಕೋಆರ್ಡಿನೇಟರ್ ಆಗಿರುವ ಸಂದೀಪ್ ಇವರು ಮಾತನಾಡಿ ವಿವಿಧ ಪ್ರವೇಶ ಪರೀಕ್ಷೆಗಳ ತರಬೇತಿಯ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಜೆಕಾರು ಪದ್ಮಗೋಪಾಲ್‌ಎಜ್ಯುಕೇಶನ್  ಟ್ರಸ್ಟ್ ವತಿಯಿಂದ ಮಣಿಪಾಲ ಜ್ಞಾನಸುಧಾ ಕಾಲೇಜಿಗೆ ದಾಖಲಾತಿ ಹೊಂದಿದ ಅರ್ಹ7 3 ವಿದ್ಯಾರ್ಥಿಗಳಿಗೆ 29.88ಲಕ್ಷ ವಿದ್ಯಾರ್ಥಿವೇತನ ನೀಡಲಾಯಿತು.
ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ಉಪಪ್ರಾಂಶುಪಾಲರುಗಳಾದ ರವಿ ಜಿ, ಹೇಮಂತ್ ಉಪಸ್ಥಿತರಿದ್ದರು. ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!