spot_img
Tuesday, June 2, 2026
spot_img

ತೆಕ್ಕಟ್ಟೆ : ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಕುಂದಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕುಂದಾಪುರ-೨ ತಾಲೂಕಿನ ತೆಕ್ಕಟ್ಟೆ ವಲಯದ ಸೇವಾಸಂಗಮ ಶಿಶುಮಂದಿರದಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ” ಕಾರ್ಯಕ್ರಮ ನಡೆಸಲಾಯಿತು.
ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಸುಬ್ರಮಣ್ಯ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ತಂಬಾಕು ಸೇವನೆಯು ಮಾನವನ ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿಯಾಗಿದ್ದು, ಇದು ಕ್ಯಾನ್ಸರ್, ಹೃದಯಾಘಾತ, ಶ್ವಾಸಕೋಶದ ಖಾಯಿಲೆ ಹಾಗೂ ಪಾರ್ಶ್ಚವಾಯು ಮುಂತಾದ ಮಾರಣಾಂತಿಕ ಖಾಯಿಲೆಗಳಿಗೆ ಪ್ರಮುಖ ಕಾರಣವಾಗಿದೆ. ತಂಬಾಕು ಬಳಸುವ ವ್ಯಕ್ತಿಯಷ್ಟೇ ಅಲ್ಲದೇ ಅವರ ಸುತ್ತಮುತ್ತಲಿರುವವರ ಆರೋಗ್ಯದ ಮೇಲೆಯೂ ಇದು ದುಷ್ಪರಿಣಾಮ ಬೀರುತ್ತದೆ. ಯುವ ಸಮುದಾಯವು ಈ ದುಶ್ಚಟಕ್ಕೆ ಬಲಿಯಾಗದಂತೆ ತಡೆಯುವುದು ನಮ್ಮೇಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಕುಂದಾಪುರ-೨ ತಾಲೂಕಿನ ಯೋಜನಾಧಿಕಾರಿ ಸುಧೀರ್ ಹಂಗಳೂರು ಮಾತನಾಡಿ, ಯೋಜನೆಯ ಹತ್ತು ಹಲವಾರು ಕಾರ್ಯಕ್ರಮಗಳಲ್ಲಿ ಜನಜಾಗೃತಿ ಕಾರ್ಯಕ್ರಮವು ಒಂದು ಪ್ರಮುಖ ಅಂಶವಾಗಿದ್ದು, ಜನಜಾಗೃತಿ ಕಾರ್ಯಕ್ರಮದಡಿಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ, ಮಾದಕ ವಸ್ತು ವಿರೋಧಿ ದಿನಾಚರಣೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ಮದ್ಯವರ್ಜನ ಶಿಬಿರ ಈ ರೀತಿಯ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತೆಕ್ಕಟ್ಟೆ ವಲಯದ ನಿಕಟಪೂರ್ವ ವಲಯಾಧ್ಯಕ್ಷ ರಮೇಶ್ ಆಚಾರ್ಯ, ತೆಕ್ಕಟ್ಟೆ ಒಕ್ಕೂಟದ ಅಧ್ಯಕ್ಷ ರಾಜೇಶ್ ಕಾಂಚನ್, ಮೇಲ್ವಿಚಾರಕಿ ಹೇಮಲತಾ ಹಾಗೂ ಸೇವಾಪ್ರತಿನಿಧಿಗಳಾದ ಸಾರಿಕಾ ಹಾಗೂ ಉಷಾ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!