spot_img
Tuesday, June 2, 2026
spot_img

ಕುಂದಾಪುರ ತಾಲೂಕಿನಲ್ಲಿ ಒಲಂಪಿಯಾಡ್ ಪರೀಕ್ಷೆಯಲ್ಲಿ ಉತ್ತೀರ್ಣರಾದ 478 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಸ್ತಾಂತರ

ಕುಂದಾಪುರ : ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಯಲು ಒಲಂಪಿಯಾಡ್ ಸಹಕಾರಿಯಾಗಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕುಂದಾಪುರ ತಾಲೂಕಿನ ಯೋಜನಾಧಿಕಾರಿ ಉಮೇಶ್ ಶೆಟ್ಟಿ ಹೇಳಿದರು.

ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕುಂದಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಒಲಂಪಿಯಾಡ್ 6.0 ಪರೀಕ್ಷೆ ಬರೆದು ಉತ್ತೀರ್ಣರಾದ ಒಟ್ಟೂ 478 ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಾದೇಶಿಕ ಕಚೇರಿಯ ಸಿ ಎಸ್ ಸಿ ಯೋಜನಾಧಿಕಾರಿಯವರಾದ ದೀಲಿಪ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಯಾವುದೇ ಹುದ್ದೆಯನ್ನು ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಬೇಕಾಗಿದ್ದು ಸಾಮಾನ್ಯವಾಗಿದೆ, ಸ್ಪರ್ಧಾತ್ಮಕ ಪರೀಕ್ಷೆ ಬರೆಯಬೇಕಾದರೆ ಸಾಕಷ್ಟು ಪೂರ್ವ ತಯಾರಿ ಅಗತ್ಯವಿರುತ್ತದೆ. ಗಾಮಾಭಿವೃದ್ಧಿ ಯೋಜನೆಯ ಸಿ.ಎಸ್.ಸಿ ಕೇಂದ್ರಗಳ ಮೂಲಕ 3 ರಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಒಲಂಪಿಯಾಡ್ ಪರೀಕ್ಷೆಗೆ ನೋಂದಾವಣೆ ಮಾಡಿಸಿ ಆನ್ಸೆನ್ ಮೂಲಕ ಪರೀಕ್ಷೆ ಬರೆದು ಸರ್ಟಿಫಿಕೇಟ್ ಪಡೆಯಬಹುದು ಹಾಗೂ ಅತೀ ಹೆಚ್ಚಿನ ಅಂಕಪಡೆದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಿ.ಎಸ್.ಸಿ ತಾಲೂಕಾ ನೋಡೆಲ್ ಅಧಿಕಾರಿ ಪ್ರದೀಪ್ ಎನ್ ಕೆ ಹಾಗೂ ಹಣಕಾಸು ಪ್ರಬಂಧಕರಾದ ರೋಹಿತ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!