spot_img
Tuesday, June 2, 2026
spot_img

8 ಕೆ.ಜಿ ಗಾತ್ರದ ಗರ್ಭಕೋಶದ ಗಡ್ಡೆಯನ್ನು ಯಶಸ್ವಿಯಾಗಿ ಹೊರತಗೆದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡ

ಉಡುಪಿ: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರಚಿಕಿತ್ಸೆ ನಡೆಸಿದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡ 8 ಕೆ.ಜಿ ಗಾತ್ರದ Fibroid Uterus ಗರ್ಭಕೋಶದ ಗಡ್ಡೆಯನ್ನು ತೆಗೆದಿದ್ದಾರೆ. ರೋಗಿಯು ಇದೀಗ ಚೇತರಿಸಿಕೊಳ್ಳುತ್ತಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ.

ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀ ರೋಗ ತಜ್ಞರಾದ ಡಾ.ಶಶಾಂಕ್ ಕಿಣಿ, ಡಾ. ಜಾಸ್ಮಿನ್, ಡಾ.ಕವಿತಾ, ಡಾ.ಅಮೃತಾಂಶ್ ಇವರ ತಂಡ ಮತ್ತು ಅರವಳಿಕೆ ತಜ್ಞರಾದ ಡಾ. ಸೂರ್ಯನಾರಾಯಣ, ಡಾ.ರಾಜ್ ಗೋಪಾಲ್ ಭಂಡಾರಿ ಹಾಗೂ ಇವರ ಸಹಾಯದಲ್ಲಿ ಶುಶ್ರೂಷಕಧಿಕಾರಿ ರಕ್ಷಿತಾ, ಓ.ಟಿ ಸಹಾಯಕಿ ಸಂಗೀತ ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

44 ವರ್ಷದ ಈ ಮಹಿಳೆ ಕಳೆದ 1 ವರ್ಷದಿಂದ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡು ಖಾಸಗಿ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುತ್ತಿದ್ದರು ಗುಣಮುಖರಾಗದ ಕಾರಣ ಈ ಮಹಿಳೆಯು ಸರ್ಕಾರಿ ತಾಯಿ ಮತ್ತು , ಮಕ್ಕಳ ಆಸ್ಪತ್ರೆಗೆ ಬಂದಿದ್ದು ಆಗ ತಜ್ಞ ವೈದ್ಯರು ಆ ಮಹಿಳೆಯನ್ನು ತಪಾಸಣೆ ಮಾಡಿಸಿದಾಗ ರೋಗಿಯ ಹೊಟ್ಟೆಯು (ಒಂದು ಮಕ್ಕಳ ಗಾತ್ರದ ) ಗರ್ಭಿಣಿಯ ಹೊಟ್ಟೆಯ ರೀತಿಯಲ್ಲಿದ್ದು ನೀರು ತುಂಬಿದ ಗೆಡ್ಡೆಯ ಸ್ಥಿತಿಯಲ್ಲಿ ಕಂಡುಬಂತು, ನಂತರ ಹೊಟ್ಟೆಯ ಅಲ್ಟ್ರಾಸೌಂಡ್ ಮತ್ತು ಸಿಟಿ ಸ್ಕ್ಯಾನ್ ಪರೀಕ್ಷೆಗೆ ಒಳಪಡಿಸಿದಾಗ ಗರ್ಭಕೋಶದಲ್ಲಿ ಗಡ್ಡೆ ಇರುವುದು ಪತ್ತೆಯಾಯಿತು, ನಂತರ ಈ ಶಸ್ತ್ರಚಿಕಿತ್ಸೆಯನ್ನು ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಸಬೇಕೆಂದು ನಿರ್ಧರಿಸಿದ್ದು ತಜ್ಞ ವೈದ್ಯರ ತಂಡ ಜಿಲ್ಲಾ ಆಸ್ಪತ್ರೆ ಮತ್ತು ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಹೆಚ್. ಅಶೋಕ ಅವರಲ್ಲಿ ಚರ್ಚಿಸಿ ಅವರ ಸಲಹೆಯಂತೆ ದಿನಾಂಕ :25.5.2026 ರಂದು ಮಹಿಳೆಗೆ ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಯಶ್ವಸಿಯಾಗಿ 8 ಕೆ.ಜಿ ಗಡ್ಡೆಯನ್ನು ಹೊರತೆಗೆದಿದ್ದಾರೆ.

ನಂತರ ಚೇತರಿಸಿಕೊಂಡು ಮಾತಾನಾಡಿದ ಮಹಿಳೆ ಆಸ್ಪತ್ರೆಯ ಎಲ್ಲಾ ವೈದ್ಯರಿಗೆ ಹಾಗೂ ಆಸ್ಪತ್ರೆಯ ಮುಖ್ಯಸ್ಥರಾದ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಕೃತಜ್ಞತೆ ಸಲ್ಲಿಸಿದರು. ಮಹಿಳೆಯು ಯಾವುದೇ ತೊಂದರೆ ಇಲ್ಲದೆ ವೈದ್ಯರ ತಂಡ ನಮಗೆ ಚಿಕಿತ್ಸೆ ನೀಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ನಮ್ಮಂತಹ ಬಡವರಿಗೆ ಇನ್ನೂ ಹೆಚ್ಚಿನ ಚಿಕಿತ್ಸೆ ಲಭ್ಯವಾಗಲಿ ಎಂದು ವೈದ್ಯರ ತಂಡಗಳಿಗೆ ಮೆಚ್ಚಿಗೆ ವ್ಯಕ್ತಪಡಿಸಿದರು. ಜಿಲ್ಲಾ ಸರ್ಜನ್ ಅವರು ಇಷ್ಟೊಂದು ಗಾತ್ರದ ಗರ್ಭಕೋಶದ ಗೆಡ್ಡೆಯನ್ನು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದ ಇಡೀ ತಜ್ಞ ವೈದ್ಯರ ತಂಡ ಹಾಗೂ ಸಿಬ್ಬಂದಿಯವರ ಕಾರ್ಯವೈಖರಿಗೆ ಪ್ರಶಂಸೆ ವ್ಯಕ್ತಪಡಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!