spot_img
Wednesday, June 3, 2026
spot_img

ಅಲ್ಬಾಡಿ:ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

ಜನರು ನಿತ್ಯ ಜೀವನದಲ್ಲಿ ಆರೋಗ್ಯದ ಬೆಳವಣಿಗೆಗೆ ಉತ್ತಮವಾದ ಆಹಾರ ಪದಾರ್ಥಗಳನ್ನು ಸೇವಿಸದೇ ಕ್ಯಾನ್ಸರ್ ಸೇರಿದಂತೆ ಇನ್ನೀತರ ಮಾರಕ ರೋಗಗಳಿಗೆ ಕಾರಣವಾಗುವ ತಂಬಾಕು ಮತ್ತು ಇನ್ನೀತರ ವಸ್ತುಗಳನ್ನು ಬಳಸುತ್ತಿರುವುದು ದುರದೃಷ್ಟಕರ,ಈ ನಿಟ್ಟಿನಲ್ಲಿ ವಿವಿಧ ಸಂಘ-ಸಂಸ್ಥೆಗಳು ಹಾಗೂ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆ,ಜನ ಜಾಗ್ರತಿ ವೇದಿಕೆಯು ಜನರಿಗೆ ಅರಿವು ಮೂಡಿಸಿ ಜಾಗ್ರತೆ ಮೂಡಿಸುವ ಕಾರ್ಯವನ್ನು ಹಮ್ಮಿಕೊಳ್ಳುತ್ತಿರುವುದು ಪ್ರಶಂಸನೀಯ ಎಂದು ಬೆಳ್ವೆ ವಲಯ ಜನ ಜಾಗ್ರತಿ ವೇದಿಕೆ ಅಧ್ಯಕ್ಷ ಸುರೇಶ ಶೆಟ್ಟಿ ಆರ್ಡಿ ಹೇಳಿದರು.
ಅವರು ಅಲ್ಬಾಡಿ ಮೂರುಕೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಂಗ ಮಂದಿರಲ್ಲಿ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆ ಬೆಳ್ವೆ ವಲಯದ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆ ಹೆಬ್ರಿ ತಾಲೂಕು ಯೋಜನಾಧಿಕಾರಿ ರೇಶ್ಮಾ,ಜನ ಜಾಗ್ರತಿ ವೇದಿಕೆ ಸದಸ್ಯ ವೈ ಪಟ್ಟಾಭಿರಾಮ್ ಭಟ್ ಮರೂರು,ಬೆಳ್ವೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್ ಚಂದ್ರಶೇಖರ್ ಶೆಟ್ಟಿ ಸರ‍್ಗೋಳಿ, ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಕೆ ಸಂಜೀವ ಆರ್ಡಿ,ಶ್ರೀ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆ ಅಲ್ಬಾಡಿ ಒಕ್ಕೂಟದ ಅಧ್ಯಕ್ಷ ರವಿಚಂದ್ರ ನಾಯ್ಕ, ಉಪಾಧ್ಯಕ್ಷ ಕೃಷ್ಣ ಮರಕಾಲ,ಕಾರ್ಯದರ್ಶಿ ಸವಿತಾ, ಮರೂರು ಒಕ್ಕೂಟದ ಅಧ್ಯಕ್ಷ ಮಂಜುನಾಥ,ಸಾಮಾನ್ಯ ಸೇವಾ ಕೇಂದ್ರದ ಮೇಲ್ವಿಚಾರಕ ಪ್ರವೀಣ್‌ಕುಮಾರ್, ಬೆಳ್ವೆ ವಲಯ ಮೇಲ್ವಿಚಾರಕ ರಾಘವೇಂದ್ರ,ಸೇವಾ ಪ್ರತಿನಿಧಿ ಪ್ರಶಾಂತ ಗುಮ್ಮೋಲ,ಸಾಮಾನ್ಯ ಸೇವಾ ಕೇಂದ್ರದ ಪ್ರತಿನಿಧಿ ರಂಜೀತಾ,ಸುಪ್ರೀತಾ, ಪದಾಧಿಕಾರಿಗಳು,ಪ್ರಬಂಧಕರು,ಸಂಯೋಜಕರು,ಜ್ಞಾನ ವಿಕಾಸ ಸದಸ್ಯರು ಉಪಸ್ಥಿತರಿದ್ದರು.
ಸೇವಾ ಪ್ರತಿನಿಧಿ ಪ್ರಶಾಂತ ಗುಮ್ಮೋಲ ಸ್ವಾಗತಿಸಿದರು. ಬೆಳ್ವೆ ವಲಯ ಮೇಲ್ವಿಚಾರಕ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.ನಾಗರತ್ನ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!