spot_img
Wednesday, June 3, 2026
spot_img

ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ನೇತೃತ್ವದಲ್ಲಿ ಜನ ಸಂಪರ್ಕ ಸಭೆ

ಕುಂದಾಪುರ, *ಜೂನ್ 01: ಸೋಮವಾರ* ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 12 ನೇ ಹೆಗ್ಗುಂಜೆ ಗ್ರಾಮ ಪಂಚಾಯಿತಿಯ ಸಮುದಾಯ ಭವನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರ ಉಪಸ್ಥಿತಿಯಲ್ಲಿ ಜನ ಸಂಪರ್ಕ ಸಭೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗಡೆ, ತಾಲ್ಲೂಕು ಪಂಚಾಯತ್ ಅಧಿಕಾರಿ ಸಂತೋಷ್, ಹೆಗ್ಗುಂಜೆ ಗ್ರಾಮ ಪಂಚಾಯಿತಿ ಪಿಡಿಒ ವಸಂತ್ ಕುಮಾರ್, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿ ಶ್ರೀಮತಿ ಉಮಾ ಪಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಶಾಸಕರು ಕಿರಣ್ ಕುಮಾರ್ ಕೊಡ್ಗಿ ಅವರು ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲಿಯೇ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಹಾಗೇ ಆಯ್ದ ಫಲಾನುಭವಿಗಳಿಗೆ 94.c. ಹಕ್ಕು ಪತ್ರ ನೀಡಲಾಯಿತು.
ಗ್ರಾಮದ ಮೂಲಸೌಕರ್ಯ, ರಸ್ತೆ, ಕುಡಿಯುವ ನೀರು, ವಸತಿ ಯೋಜನೆ ಹಾಗೂ ಕಂದಾಯ , ಮೆಸ್ಕಾಂ, ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಶಾಸಕರ ಗಮನ ಸೆಳೆದರು. ಅಹವಾಲುಗಳನ್ನು ಆಲಿಸಿದ ಶಾಸಕರು, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವೇಗವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!