spot_img
Wednesday, June 3, 2026
spot_img

ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಪ್ರಾಜೇಕ್ಟ್ ಎಕ್ಸ್ಪೋ ಕಾರ್ಯಕ್ರಮ

ಕುಂದಾಪುರ (ಮೇ.02): ಇಲ್ಲಿನ ಡಾ. ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗವು ಎಂಎಸ್.ಡಿ.ಸಿ, ಮಣಿಪಾಲ ಸಹಯೋಗದಲ್ಲಿ ಆಯೋಜಿಸಿದ್ದ “ಪ್ರಾಜೆಕ್ಟ್ ಎಕ್ಸ್ಪೋ ಸೃಜನಶೀಲತೆ ಮತ್ತು ತಂತ್ರಜ್ಞಾನದ ಸಂಗಮ” ಕಾರ್ಯಕ್ರಮವು ಜೂನ್ 2 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಾ.ಕೆ.ಉಮೇಶ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ.ಯು.ಸಿ.ನಿರಂಜನ್, ಡಾ.ಮುರಳಿಕೃಷ್ಣ ಎಸ್.ಎನ್., ಶಶಿಧರ ಶೆಟ್ಟಿ, ಡಾ.ಅಂಜಯ್ಯ ದೇವಿನೇನಿ ಹಾಗೂ ಶ್ರೀಮತಿ ರಾಜಲಕ್ಷ್ಮಿ ಆನಂದನ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಅತಿಥಿಗಳು ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ವಿದ್ಯಾರ್ಥಿಗಳು ಸೃಜನಶೀಲತೆ, ನವೀನತೆ ಹಾಗೂ ಪರಿಣಾಮಕಾರಿ ಸಂವಹನ ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯತೆಯನ್ನು ತಿಳಿಸಿದರು. ನಿರಂತರವಾಗಿ ತಮ್ಮ ಜ್ಞಾನವನ್ನು ನವೀಕರಿಸಿಕೊಂಡು ತಂತ್ರಜ್ಞಾನ ಕ್ಷೇತ್ರದ ಹೊಸ ಬೆಳವಣಿಗೆಗಳಿಗೆ ಹೊಂದಿಕೊಳ್ಳುವ ಮೂಲಕ ಯಶಸ್ಸು ಸಾಧಿಸಬಹುದು ಎಂದರು. ವಿದ್ಯಾರ್ಥಿಗಳು ನವೀನ ಯೋಜನೆಗಳ ಮೂಲಕ ಸಮಾಜಕ್ಕೆ ಉಪಯುಕ್ತವಾದ ಪರಿಹಾರಗಳನ್ನು ನೀಡುವಂತೆ ಕರೆ ನೀಡಿದರು.
ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿನಿಯರಾದ ರಶ್ಮಿತಾ, ಅಪೂರ್ವ, ಸಿಂಚನಾ, ನಾಗಶ್ರೀ, ಅನುಶ್ರೀಶೆಟ್ಟಿ ಹಾಗೂ ಸ್ಮಿತಾ ಅತಿಥಿಗಳನ್ನು ಪರಿಚಯಿಸಿದರು. ಸಾನಿಕಾ ವಂದಿಸಿದರು. ನಿರೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ನವೀನ ಯೋಜನೆಗಳ ಪ್ರಸ್ತುತಿ ಗಮನ ಸೆಳೆಯಿತು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!