spot_img
Saturday, June 6, 2026
spot_img

ಕುಂದಾಪುರ ಬಿ.ಬಿ. ಹೆಗ್ಡೆ ಕಾಲೇಜು: ಪ್ರಥಮ ಚಿಕಿತ್ಸೆ ತರಬೇತಿ

ಕುಂದಾಪುರ : ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಹಾಗೂ ಎನ್.ಎಸ್.ಎಸ್ ಘಟಕ ಇದರ ಸಂಯುಕ್ತ ಆಶ್ರಮದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದೊಂದಿಗೆ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮ ಮೇ 22 ರಂದು ಜರುಗಿತು.

ಇಂಡಿಯನ್ ರೆಡ್ ಕ್ರಾಸ್ ಘಟಕದ ಸಭಾಪತಿ ಜಯಕರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಇಂದಿನ ಯುವ ಪೀಳಿಗೆ ಸಮಾಜದಲ್ಲಿನ ಆಗು ಹೋಗುಗಳಿಗೆ ಹೇಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರದ ಇಶಾನಿ ಮೆಡಿಕಲ್ ಸೆಂಟರ್ ಇಲ್ಲಿನ ವೈದ್ಯಾಧಿಕಾರಿ ಡಾ| ಸೋನಿ ಡಿಕೋಸ್ಟ ಅವರು ಪ್ರಥಮ ಚಿಕಿತ್ಸೆ ಪ್ರಾತ್ಯಕ್ಷಿಕೆಯ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ.ಉಮೇಶ್ ಶೆಟ್ಟಿ ಕಾಲೇಜು ವಿದ್ಯಾರ್ಥಿಗಳಲ್ಲಿ ಪ್ರಥಮ ಚಿಕಿತ್ಸೆ ಅರಿವು ಅತ್ಯವಶ್ಯಕ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಇಂಡಿಯನ್ ರೆಡ್ ಕ್ರಾಸ್ ಘಟಕದ ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್, ಕಾಲೇಜಿನ ವೈ. ಅರ್. ಸಿ ಘಟಕದ ಸಂಯೋಜನಾಧಿಕಾರಿ ಪೃಥ್ವಿಶ್ರೀ ಜಿ ಶೆಟ್ಟಿ, ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಪೂಜಾ ಕುಂದರ್ ಉಪಸ್ಥಿತರಿದ್ದರು.

ಕಾಲೇಜು ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನ ಘಟಕದ ಕಾರ್ಯಕ್ರಮ ಅಧಿಕಾರಿ ರಾಜೇಶ್ ಶೆಟ್ಟಿ ವಂದಿಸಿದರು. ತೃತೀಯ ಬಿ.ಕಾಮ್ ವಿದ್ಯಾರ್ಥಿನಿ ಸ್ನೇಹಾ ಪ್ರಾರ್ಥಿಸಿದರು. ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಶರಣ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!