spot_img
Friday, June 5, 2026
spot_img

ಸಹಕಾರ ನೌಕರರಿಗೆ ನಿವೃತ್ತಿ ಎಂಬುದಿಲ್ಲ- ಎಂ. ಮಹೇಶ್ ಹೆಗ್ಡೆ |ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಭಿನಂದನಾ ಕಾರ್ಯಕ್ರಮ

ಕುಂದಾಪುರ: ವೃತ್ತಿಗೆ ಸೇರಿದ ಮೇಲೆ ನಿವೃತ್ತಿ ಯಾಗಲೇಬೇಕು. ಒಂದು ವ್ಯವಸ್ಥೆಯಲ್ಲಿದ್ದು, ಕೆಲಸ ಮಾಡುವುದು ವಿಶೇಷ. ಸಹಕಾರ ಸಂಘದಲ್ಲಿ ಕೆಲಸ ಮಾಡುವುದು ಕೇವಲ ಸಂಬಳ ತೆಗೆದುಕೊಳ್ಳುವುದಕ್ಕೆ ಎಂದು ತಿಳಿಯಬಾರದು. ಅದೊಂದು ಸೇವೆಯಾಗಿರುತ್ತದೆ. ಅಲ್ಲಿ ರೈತರ, ಕೃಷಿಕರ, ಸದಸ್ಯರ ಬಗ್ಗೆ ಕಾಳಜಿ ವಹಿಸಿ ಕೆಲಸ ಮಾಡಬೇಕು. ನಮ್ಮ ಭಾಗದ ಸಹಕಾರ ಸಂಘಗಳ ರಾಜ್ಯದಲ್ಲಿ ಉತ್ತಮ ಸಹಕಾರ ಸಂಘಗಳಾಗಿ ಗುರುತಿಸಿಕೊಂಡಿವೆ. ಸಿಬ್ಬಂದಿಗಳು ಹೆಚ್ಚು ಮುತುವರ್ಜಿ ಮಾಡುತ್ತಿರುವುದರಿಂದ ಸಂಘವು ಅಭಿವೃದ್ಧಿ ಹೊಂದುತ್ತದೆ. ಉತ್ತಮ ಸೇವೆಯು ನಮ್ಮ ಸಂಘವನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ. ಸಹಕಾರ ಸಂಘ ನೌಕರರಿಗೆ ನಿವೃತ್ತಿ ಎಂಬುದಿಲ್ಲ. ಮುಂದೆಯೂ ಸಂಘ ನಿವೃತ್ತಿ ಹೊಂದಿದವರನ್ನು ಗುರುತಿಸುತ್ತದೆ ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಎಂ. ಮಹೇಶ್ ಹೆಗ್ಡೆ ಹೇಳಿದರು.

 

ಅವರು ಜೂನ್ 5 ರಂದು ಕುಂದಾಪುರದಲ್ಲಿ ನೆಡೆದ ಅವಿಭಜಿತ ಕುಂದಾಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ನೌಕರರ ಒಕ್ಕೂಟದ ವತಿಯಿಂದ ಏರ್ಪಡಿಸಿದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಧೀರ್ ಕುಮಾರ್ ಜೆ., ಸಹಕಾರ ಅಭಿವೃದ್ಧಿ ಅಧಿಕಾರಿ ಎಂ.ಸಿ. ಸ್ವಾಮಿ, ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಕುಂದಾಪುರ ಶಾಖಾ ವ್ಯವಸ್ಥಾಪಕರಾದ ಪ್ರವೀಣ ಕುಮಾರ್ ಶೆಟ್ಟಿ, ಕೊಲ್ಲೂರು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಅರುಣ ಕುಮಾರ್ ಶೆಟ್ಟಿ, ಕುಂದಾಪುರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ, ಮಾನಂಜೆ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಪ್ರದೀಪ ಯಡಿಯಾಳ ಆಗಮಿಸಿ ಶುಭ ಕೋರಿದರು.

ಮೇ 30 ನಿವೃತ್ತರಾದ ಕೊಲ್ಲೂರು ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ್ ಶ್ಯಾನುಭಾಗ್, ಮಾನಂಜೆ ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ. ಮಂಜುನಾಥ ನಾಯ್ಕ್, ಕುಂದಾಪುರ ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ನರಸಿಂಹ ಹೊಳ್ಳ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಅವಿಭಜಿತ ಕುಂದಾಪುರ ತಾಲೂಕು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳ ನೌಕರರ ಒಕ್ಕೂಟದ ಅಧ್ಯಕ್ಷರಾದ ವಿಶ್ವೇಶ್ವರ ಐತಾಳ್ ಪ್ರಾಸ್ತಾವಿಕ ಮಾತನಾಡಿದರು. ವಲಯ ಮೇಲ್ವಿಚಾರಕರಾದ ಶಿವರಾಮ ಪೂಜಾರಿ, ಸಂದೀಪ್ ಕುಮಾರ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಶುಭ ಕೋರಿದರು.

ಕೃಷಿ ಪತ್ತಿನ ಸಹಕಾರ ಸಂಘಗಳ ಪರವಾಗಿ ಖಂಬದಕೋಣೆ ರೈತರ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಪೈ, ಕುಂದಾಪುರ ವ್ಯವಸಾಯ ಸೇವಾ ಸಹಕಾರ ಸಂಘದ ಸಂತೋಷ್, ಮಾನಂಜೆ ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚೆನ್ನ ಪೂಜಾರಿ ಅಭಿನಂದನೆ ಸಲ್ಲಿಸಿ ಮಾತನಾಡಿದರು. ಅವಿಭಜಿತ ಕುಂದಾಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ನೌಕರರ ಒಕ್ಕೂಟದ ಕಾರ್ಯದರ್ಶಿ ಕೀರ್ತಿ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಅಮವಾಸೆಬೈಲು ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಕುಮಾರ್ ಭಾಗವತ್ ವಂದಿಸಿದರು.

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!