spot_img
Friday, June 5, 2026
spot_img

ಹೆಂಗವಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿಶ್ವ ಪರಿಸರ ದಿನಾಚರಣೆ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕುಂದಾಪುರ-2 ತಾಲೂಕಿನ ಹೆಂಗವಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆ ಅಮಾಸೆಬೈಲು ಶಾಖೆ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಹೆಂಗವಳ್ಳಿ ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ಪರಿಸರ ದಿನಾಚರಣೆ” ಆಚರಿಸಲಾಯಿತು.
ವಲಯ ಅರಣ್ಯಾಧಿಕಾರಿ ನವೀನ್ ಡಿಸೋಜರವರು ಮಾತನಾಡುತ್ತಾ ಪರಿಸರ ದಿನಾಚರಣೆ ಕೇವಲ ಗಿಡಗಳನ್ನು ನೆಡುವುದು ಮಾತ್ರವಲ್ಲದೇ ಪರಿಸರಕ್ಕೆ ಹಾನಿಯಾಗದಂತೆ ಉಪಯುಕ್ತವಾದ ಕೆಲಸಗಳನ್ನು ಮಾಡಬೇಕು. ಗಾಳಿ ನೀಡು ಬೆಳಕು ಮಾನವನಿಂದ ಕಲುಷಿತವಾಗುತ್ತಿದೆ. ಇದನ್ನು ತಡೆಗಟ್ಟುವುದು ನಮ್ಮೇಲ್ಲರ ಆದ್ಯ ಕರ್ತವ್ಯವಾಗಿದೆ ಈ ನಿಟ್ಟಿನಲ್ಲಿ ಶಾಲಾ ಮಕ್ಕಳು, ಪೋಷಕರು ಹಾಗೂ ಜನರು ಜಾಗೃತರಾಗಬೇಕು ಎಂದು ತಿಳಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸುಧೀರ್ ಹಂಗಳೂರು ಮಾತನಾಡುತ್ತಾ, ಗ್ರಾಮಾಭಿವೃದ್ಧಿ ಯೋಜನೆ ಪರಿಸರಕ್ಕೆ ಪೂರಕವಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಟಾನ ಮಾಡುತ್ತಿದ್ದು, ಕೆರೆದಂಡೆಯಲ್ಲಿ ಗಿಡ ನಾಟಿ ಕಾರ್ಯಕ್ರಮ, ಸಾಮಾಜಿಕ ಅರಣ್ಯೀಕರಣ, ಪರಸರ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಜೊತೆಗೆ ಶಾಲೆಗಳ ಸರ್ವತೋಮುಖ ಅಭಿವೃಧ್ಧಿಗೆ ಬೆಂಚ್ ಡೆಸ್ಕ್‌ಗಳ ವಿತರಣೆ, ಜ್ಞಾನದೀಪ ಶಿಕ್ಷಕರ ಒದಗಣೆ, ಶಾಲಾ ಕೊಠಡಿ ರಚನೆಗೆ ಅನುದಾನ ವಿತರಣೆ ಮುಂತಾದ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಧುಸೂದನ್, ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀಧರ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಕರುಣಾಕರ ಹೆಗ್ಡೆ, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ರಘುರಾಮ್ ರೈ, ಅರಣ್ಯ ಸಮಿತಿ ಸದಸ್ಯರಾದ ಪ್ರಭಾಕರ ಶೆಟ್ಟಿ ಹಿರೀಬೈಲು, ಪಂಚಾಯತ್ ಕಾರ್ಯದರ್ಶಿ ಭಾಸ್ಕರ್ ಶೆಟ್ಟಿ, ಪಂಚಾಯತ್ ಮಾಜಿ ಅದ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಯೋಗೀಶ್, ಅರಣ್ಯ ಇಲಾಖೆಯ ಇತರ ಸಿಬ್ಬಂದಿಗಳು, ಶಾಲಾ ಪ್ರಾಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕರುಣಾಕರ್ ಹೆಗಡೆ ಸ್ವಾಗತಿಸಿ, ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕರಾದ ಪ್ರದೀಪ್ ಕುಮಾರ್ ವಂದಿಸಿ, ಶಾಲಾ ದೈಹಿಕ ಶಿಕ್ಷಕರಾದ ಸಣ್ಣಯ್ಯ ನಾಯ್ಕ್ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!