spot_img
Saturday, June 6, 2026
spot_img

ಶ್ರೇಷ್ಠ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್.ಜನಾರ್ದನ್ ಮರವಂತೆ ಇನ್ನಿಲ್ಲ

kundapura: ಕರ್ನಾಟಕ ರಾಜ್ಯ ಕಂಡ ಶ್ರೇಷ್ಠ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್.ಜನಾರ್ದನ್ ಮರವಂತೆ (88ವ) ವಯೋಸಹಜ ಕಾರಣದಿಂದ ಜೂನ್ 6 ಶನಿವಾರ ಬೆಳಿಗ್ಗೆ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೂರು ದಶಕಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ದುಡಿದ ಅವರು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸುದೀರ್ಘ 25ಕ್ಕೂ ಹೆಚ್ಚು ವರ್ಷಗಳ ಕಾಲ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ, ತಜ್ಞರಾಗಿ ಸೇವೆ ಸಲ್ಲಿಸಿದ್ದರು. ಪಂಚಾಯತ್ ರಾಜ್ ವಿಷಯದಲ್ಲಿ ಅವರು ಅನೇಕ ಕೃತಿಗಳನ್ನು ರಚಿಸಿದ್ದು ಜನಾಧಿಕಾರ ಪುಸ್ತಕ ಇಡೀ ಪಂಚಾಯತ್ ರಾಜ್ ವ್ಯವಸ್ಥೆಗೆ ಕೈಪಿಡಿ ಆಗಿತ್ತು. ಮರವಂತೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದ ಅವರು ಬೈಂದೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ನಾಳೆ ಅಂತಿಮ ದರ್ಶನ:
ಮೃತರ ಅಂತಿಮ ದರ್ಶನ ಜೂನ್ 7 ಆದಿತ್ಯವಾರ ಬೆಳಿಗ್ಗೆ 8 ಗಂಟೆಯಿಂದ ಮಧಾಹ್ನ 3 ಗಂಟೆಯ ತನಕ ಮರವಂತೆಯ ಸಾಧನ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!