spot_img
Sunday, June 7, 2026
spot_img

ಸಿಲಿಂಡರ್ ಬೆಲೆ ಮತ್ತೆ 29 ರೂಪಾಯಿ ಏರಿಕೆ : ಕೇಂದ್ರ ಸರ್ಕಾರದ ದುಬಾರಿ ನೀತಿಯಿಂದ ಜನಸಾಮಾನ್ಯರಿಗೆ ಸಂಕಷ್ಟ -ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ

ಕುಂದಾಪುರ :ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಮತ್ತೆ 29 ರೂ. ಹೆಚ್ಚಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಖಂಡನೀಯ ಎಂದು  ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ  ತಿಳಿಸಿದ್ದಾರೆ.

ಕಳೆದ ಮೂರು ತಿಂಗಳಲ್ಲೇ ಇದು ಎರಡನೇ ಬಾರಿ ಬೆಲೆ ಏರಿಕೆಯಾಗಿದ್ದು, ಮಾರ್ಚ್ ತಿಂಗಳಲ್ಲಿ 60 ರೂ. ಹೆಚ್ಚಿಸಲಾಗಿತ್ತು. ಈಗಿನ 29 ರೂ. ಏರಿಕೆಯೊಂದಿಗೆ ಕೇವಲ ಮೂರು ತಿಂಗಳಲ್ಲಿ ಒಟ್ಟು 89 ರೂ. ಹೆಚ್ಚಳವಾಗಿದೆ. ಒಂದು ಕಡೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಿದ್ದರೆ, ಮತ್ತೊಂದು ಕಡೆ ಅಡುಗೆ ಅನಿಲದ ಬೆಲೆ ಹೆಚ್ಚಿಸುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಮಧ್ಯಮ ವರ್ಗ, ಬಡವರು ಮತ್ತು ಗೃಹಿಣಿಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹಾಕಿದೆ.

ಅಡುಗೆ ಮನೆ ಎನ್ನುವುದು ಪ್ರತಿಯೊಂದು ಕುಟುಂಬದ ಜೀವನದ ಕೇಂದ್ರಬಿಂದು. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ನೇರ ಪರಿಣಾಮ ಮಹಿಳೆಯರು ನಿರ್ವಹಿಸುವ ಮನೆಯ ಬಜೆಟ್ ಮೇಲೆ ಬೀಳುತ್ತದೆ. ದಿನನಿತ್ಯದ ಖರ್ಚು ನಿಭಾಯಿಸಲು ಸಾಮಾನ್ಯ ಕುಟುಂಬಗಳು ಪರದಾಡುತ್ತಿರುವ ಸಂದರ್ಭದಲ್ಲಿ ಇಂತಹ ನಿರ್ಧಾರಗಳು ಜನವಿರೋಧಿ ಕ್ರಮಗಳಾಗಿವೆ. ಈಗಾಗಲೇ ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರ ವಾಣಿಜ್ಯ ಸಿಲಿಂಡರ್ ದರವನ್ನು ಏರಿಸಿದೆ. ಪರಿಣಾಮ ಹೋಟೆಲ್ ತಿಂಡಿ, ತಿನಿಸುಗಳು, ಟೀ-ಕಾಫಿ ದರ ಏರಿಕೆಯಾಗಿದೆ. ಈಗ ಅಡುಗೆ ಸಿಲಿಂಡರ್ ದರವನ್ನು ಭಾರೀ ಪ್ರಮಾಣದಲ್ಲಿ ಏರಿಸಲಾಗಿದೆ. ಈ ರೀತಿ ಬೆಲೆ ಏರಿಕೆ ಮಾಡಿದರೆ ಜನಸಾಮಾನ್ಯರ ಬದುಕು ಏನಾಗಬೇಕು .

2014ರಲ್ಲಿ ಅಡುಗೆ ಅನಿಲದ ಬೆಲೆ ಕೈಗೆಟಕದ ಮಟ್ಟದಲ್ಲಿತ್ತು ಎಂದು ಹೇಳಿ ಅಧಿಕಾರಕ್ಕೆ ಬಂದವರು, ಇಂದು ಸಾಮಾನ್ಯ ಜನರ ಬದುಕನ್ನೇ ದುಬಾರಿಯನ್ನಾಗಿ ಮಾಡಿದ್ದಾರೆ. ಬೆಲೆ ಏರಿಕೆಯನ್ನು ನಿಯಂತ್ರಿಸುವ ಬದಲು ನಿರಂತರವಾಗಿ ಜನರ ಮೇಲೆ ಹೊರೆಯಾಗುವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಕಚ್ಚಾ ತೈಲದ ಬೆಲೆ ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಇಳಿಕೆಯಾದರೂ ಮದ್ಯ ಪ್ರಾಚ್ಯದ ಯುದ್ದದ ನೆಪವನ್ನು ಮುಂದಿಟ್ಟುಕೊಂಡು ದೇಶದಲ್ಲಿ ದಿನನಿತ್ಯ ಪೆಟ್ರೋಲ್ ಡೀಸೆಲ್ ಅಡುಗೆ ಅನಿಲದ ದರವನ್ನು ಏರಿಕೆ ಮಾಡಿ ಜನರನ್ನು ಲೂಟಿ ಹೊಡೆಯುತ್ತಿದ್ದಾರೆ.

ಕೇಂದ್ರ ಸರ್ಕಾರ ತಕ್ಷಣವೇ ಈ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆದು, ಸಾಮಾನ್ಯ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಬದುಕನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳುವ ಬದಲು, ಅವರ ಹಿತಾಸಕ್ತಿಯನ್ನು ಕಾಪಾಡುವ ನೀತಿಗಳನ್ನು ಜಾರಿಗೆ ತರಬೇಕೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!