spot_img
Monday, June 8, 2026
spot_img

“ಪುಸ್ತಕಗಳು ನೀಡುವ ಖುಷಿ ಯಾವ ಯಂತ್ರವೂ ನೀಡುವುದಿಲ್ಲ”-ಡಾ.ಪಾರ್ವತಿ ಜಿ. ಐತಾಳ್

ಶಂಕರನಾರಾಯಣ: ಸಾಹಿತ್ಯವು ಮನುಷ್ಯನಿಗೆ ಜೀವನವನ್ನು ಹೇಗೆ ಕಟ್ಟಿಕೊಳ್ಳಬೇಕು ಎಂಬುದರ ಜೊತೆಗೆ ಮಾನವೀಯತೆ, ಉತ್ತಮ ಸಂಸ್ಕಾರ ಹಾಗೂ ಇನ್ನಿತರ ಉತೃಷ್ಟ ಜೀವನ ಮೌಲ್ಯಗಳನ್ನು ಕಲಿಸುತ್ತದೆ. ಪುಸ್ತಕಗಳನ್ನು ಓದುವ ಅಭ್ಯಾಸವು ಜೀವನದಲ್ಲಿ ಶ್ರದ್ಧೆ ಮತ್ತು ಅಭಿವೃದ್ದಿಗೆ ಪೂರಕವಾಗಿದೆ. ಆಧುನಿಕ ತಂತ್ರಜ್ಞಾನ ಮತ್ತು ಯಂತ್ರಗಳು ನೀಡುವ ಸಂತೋಷಕ್ಕಿಂತ ಪುಸ್ತಕಗಳ ಓದು ಹೆಚ್ಚು ಖುಷಿ ಕೊಡುತ್ತದೆ. ಹಾಗಾಗಿ ಪಠ್ಯದ ಜೊತೆಗೆ ಸಾಹಿತ್ಯದ ಓದು ವಿದ್ಯಾರ್ಥಿಗಳಿಗೆ ಅತ್ಯಂತ ಅವಶ್ಯಕವಾಗಿದೆ ಎಂದು ಕುಂದಾಪುರದ ಭಂಡಾರ್ಕರ್ಸ್ ಕಾಲೇಜು ನಿವೃತ್ತ ಆಂಗ್ಲ ಭಾಷಾ ಪ್ರಾಧ್ಯಾಪಕಿ ಮತ್ತು ಖ್ಯಾತ ಅನುವಾದಕಿ ಡಾ.ಪಾರ್ವತಿ ಜಿ. ಐತಾಳ್ ಹೇಳಿದರು.

ಅವರು ವಿಶ್ವ ಮಲೆಯಾಳಿ ಕೌನ್ಸಿಲ್ ಉಡುಪಿ ಪ್ರಾಂತ್ಯದವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಶಂಕರನಾರಾಯಣದ ಐಕ್ಯು‌ಎಸಿ, ಗ್ರಂಥಾಲಯ ಸಮಿತಿ ಮತ್ತು ವಾಣಿಜ್ಯ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಪುಸ್ತಕ ಕೊಡುಗೆ ಕಾರ್ಯಕ್ರಮ”ದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ರೂ. 23,000 ಮೌಲ್ಯದ 106 ಪುಸ್ತಕಗಳನ್ನು ಉಡುಪಿ ಪ್ರಾಂತ್ಯದ ಚೇರ್ಮನ್ ಶ್ರೀ ಶಿನೋದ್ ಟಿ.ಆರ್ ಕಾಲೇಜಿನ ಪ್ರಾಂಶುಪಾಲರಿಗೆ ಹಸ್ತಾಂತರಿಸಿದರು. ಡಾ. ಪಾರ್ವತಿ ಜಿ ಐತಾಳ್ ಅನುವಾದಿಸಿದ “ಅಪರ್ಣಾಳ ಸೆರೆಮನೆಗಳು” ಎಂಬ ಕೃತಿಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ ಭಟ್ ಬಿಡುಗಡೆಗೊಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಮಾತನಾಡಿ ನಿರಂತರ ಓದಿನಿಂದ ಸಿಗುವ ಪ್ರಯೋಜನಗಳ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಿ ಪುಸ್ತಕಗಳನ್ನು ಓದುವ ಹವ್ಯಾಸ ರೂಪಿಸಿಕೊಳ್ಳಲು ಪ್ರೇರೇಪಿಸಿದರು. ದ್ವಿತೀಯ ಎಂಕಾಂ ವಿದ್ಯಾರ್ಥಿನಿ ದೀಕ್ಷಿತಾ ನಿರೂಪಿಸಿದರು. ಗ್ರಂಥಾಲಯ ಸಮಿತಿಯ ಸಂಯೋಜಕ ಪ್ರಸ್ತುತ ವೈ.ಎನ್ ಸ್ವಾಗತಿಸಿ, ಸ್ನಾತಕೋತ್ತರ ವಿಭಾಗ ಸಂಯೋಜಕಿ ಪ್ರಜ್ಞಾ ಪ್ರಸ್ತಾವನೆಗೈದರು ಹಾಗೂ ದ್ವಿತೀಯ ಎಂ.ಕಾಂ ವಿದ್ಯಾರ್ಥಿನಿ ಮಾನಸ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!