spot_img
Monday, June 8, 2026
spot_img

ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 

ಬಾರ್ಕೂರು: ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಜೂನ್ 7ರಂದು 2025- 26ನೇ ಸಾಲಿನಲ್ಲಿ  SSLC ಮತ್ತು ದ್ವಿತೀಯ PUC ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಎಲ್ಲಾ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಗೌರವಿಸಲಾಯಿತು.

ದೇವಸ್ಥಾನದ ಆಡಳಿತ ಧರ್ಮದರ್ಶಿ ಬಾರ್ಕೂರು ರಂಗನಕೇರಿ ಶ್ರೀನಿವಾಸ್ ಶೆಟ್ಟಿಗಾರ್ ಸಭೆಯ ಅಧ್ಯಕ್ಷತೆ ವಹಿಸಿ ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಿದರು. ನಂತರ ಅವರು ಮಾತನಾಡಿ, ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ಬೆಳೆಸಿಕೊಂಡು ಸಮಾಜಕ್ಕೆ ಒಳಿತಾಗುವ ಕೆಲಸ ಮಾಡಿ, ಆದರ್ಶ ವಿದ್ಯಾರ್ಥಿಗಳಾಗಿ ಸಮಾಜಕ್ಕೆ ಕೀರ್ತಿ ತನ್ನಿ ಎಂದು ಕಿವಿಮಾತು ಹೇಳಿದರು.

ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ. ಜಯರಾಮ್ ಶೆಟ್ಟಿಗಾರ್, ವೀರೇಶ್ವರ ಸೇವಾ ಸಮಿತಿ ಅಧ್ಯಕ್ಷ ಪುರುಷೋತ್ತಮ್ ಶೆಟ್ಟಿಗಾರ್ ಉಡುಪಿ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ಮಾತನಾಡಿದರು.

ಈ ಸಂದರ್ಭದಲ್ಲಿ 245ನೇ ಮಾಸಿಕ ಸತ್ಯನಾರಾಯಣ ಪೂಜಾ ಸೇವಾ ಕರ್ತರಾದ ಶ್ರೀಮತಿ ಪೂರ್ಣಿಮಾ ಮತ್ತು ಶ್ರೀ ಭಾಸ್ಕರ್ ಶೆಟ್ಟಿಗಾರ ಅಸೋಡು ಮುಂಬೈ ಇವರನ್ನು ಗೌರವಿಸಲಾಯಿತು.

ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ರಾಜ್ಯಮಟ್ಟದಲ್ಲಿ 10ನೇ ರ್‍ಯಾಂಕ್ ಗಳಿಸಿದ ವಿದ್ಯಾರ್ಥಿನಿ ಗಾಯತ್ರಿ ಜಯ ಶೆಟ್ಟಿಗಾರ್ ಬಾರ್ಕೂರು, ಉಡುಪಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಕೋಸ್ಟಲ್ ರೀಜನ್ ಇದರ ನೂತನ ಅಧ್ಯಕ್ಷರಾದ ಡಾ. ಚಂದ್ರಶೇಖರ್ ವಿ ಎಸ್ ಕೆಳಾರ್ಕಳ ಬೆಟ್ಟು, ಟ್ರಸ್ಟ್ ಕಾರ್ಯದರ್ಶಿಯಾಗಿ ಆಯ್ಕೆಯಾದ ಚಂದ್ರಶೇಖರ್ ಶೆಟ್ಟಿಗಾರ್ ಗುಂಡ್ಮಿ, ದಾನಿಗಳಾದ ಯಶೋಧ ಶ್ರೀನಿವಾಸ ಶೆಟ್ಟಿಗಾರ್ ಬಾರ್ಕೂರು, ಶ್ರೀಮತಿ ವೀಣಾ ಮತ್ತು ಶ್ರೀ ಬಾಲಕೃಷ್ಣ ಶೆಟ್ಟಿಗಾರ್ ವಕ್ವಾಡಿ, ಸಂಜೀವ ಶೆಟ್ಟಿಗಾರ ಸಾಸ್ತಾನ ಇವರನ್ನು ಸಭೆಯಲ್ಲಿ ವಿಶೇಷವಾಗಿ ಗೌರವಿಸಲಾಯಿತು.

ವೇದಿಕೆಯಲ್ಲಿ ಯುವ ವೇದಿಕೆ ಅಧ್ಯಕ್ಷ ಸಂಜೀವ ಶೆಟ್ಟಿಗಾರ ಸಾಸ್ತಾನ, ಶ್ರೀ ಬ್ರಹ್ಮಲಿಂಗ ವೀರಭದ್ರ ಪದ್ಮಶಾಲಿ/ ಶೆಟ್ಟಿಗಾರ್ ಸಮಾಜಸೇವಾ ಟ್ರಸ್ಟ್ ಅಧ್ಯಕ್ಷ ಸುಧಾಕರ ವಕ್ವಾಡಿ, ಟ್ರಸ್ಟಿ ರಘುರಾಮ್ ಶೆಟ್ಟಿಗಾರ್ ಚೇರ್ಕಾಡಿ, ಸಹಮೊಕ್ತೇಸರ ಜನಾರ್ದನ್ ಶೆಟ್ಟಿಗಾರ ವಕ್ವಾಡಿ, ಸಹ ಮೊಕ್ತೇಸರರು, ಮಾಗಣಿ ಗುರಿಕಾರರು, ವಿವಿಧ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶ್ರೀನಿವಾಸ್ ಶೆಟ್ಟಿಗಾರ್ ಸ್ವಾಗತಿಸಿದರು. ಕಾರ್ಯದರ್ಶಿ ಜನಾರ್ಧನ್ ಶೆಟ್ಟಿಗಾರ ವರದಿ ವಾಚಿಸಿದರು. ಚಂದ್ರಶೇಖರ ಶೆಟ್ಟಿಗಾರ ಹೊಸಾಳ ಆಯ-ವ್ಯಯ ಮಂಡಿಸಿದರು. ಸಂಘಟನಾ ಸಮಿತಿಯ ಅಧ್ಯಕ್ಷ ಭಾಸ್ಕರ ಶೆಟ್ಟಿಗಾರ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!