spot_img
Monday, June 8, 2026
spot_img

ಬೈಂದೂರು ಬಿಜೆಪಿ ಮಂಡಲ ಸಂಘಟನಾತ್ಮಕ ಸಭೆ ಯಶಸ್ವಿ

ಬೈಂದೂರು ಬಿಜೆಪಿ ಕಚೇರಿಯಲ್ಲಿ ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ. ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಮಂಡಲ ಸಂಘಟನಾತ್ಮಕ ಸಭೆ ನಡೆಯಿತು.
ಸಭೆಯಲ್ಲಿ ಸಂಘಟನಾತ್ಮಕ ವಿಚಾರಗಳು ಹಾಗೂ ಎಸ್‌ಐಆರ್ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಲಾಯಿತು. ಜಿಲ್ಲಾ ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ 12 ವರ್ಷಗಳ ಸಾಧನೆಗಳು ಹಾಗೂ ವಿವಿಧ ಜನಪರ ಕಾರ್ಯಕ್ರಮಗಳ ಕುರಿತು ವಿವರಿಸಿದರು.
ಶಾಸಕ ಗುರುರಾಜ್ ಗಂಟಿಹೊಳೆ ಅವರು ಕಾರ್ಯಕರ್ತರು ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಅವರು ಸಂಘಟನಾತ್ಮಕ ವಿಚಾರಗಳ ಕುರಿತು ಮಾತನಾಡಿ, ಪಕ್ಷದ ಬಲವರ್ಧನೆಗೆ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಂಡಲ ಪ್ರಭಾರಿ ಸುರೇಶ್ ಶೆಟ್ಟಿ ಕಾಡೂರು, ಮಂಡಲ ಉಸ್ತುವಾರಿ ದಿನಕರ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಸುರೇಶ್ ಬಟ್ವಾಡಿ, ಜಿಲ್ಲಾ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ದೇವಾಡಿಗ, ಬಾಲಚಂದ್ರ ಭಟ್ ಹಾಗೂ ಸದಾನಂದ ಉಪ್ಪಿನಕುದ್ರು, ಡಾ ಅತುಲ್ ಕುಮಾರ್ ಶೆಟ್ಟಿ,ಮಂಡಲ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರು, ಶಕ್ತಿ ಕೇಂದ್ರಗಳ ಅಧ್ಯಕ್ಷರು ಹಾಗೂ ಪಕ್ಷದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!