spot_img
Monday, June 8, 2026
spot_img

ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆ ಅಂಪಾರು – ಸಂಪ್ರದಾಯದ ಸೊಬಗಿನಲ್ಲಿ ನೂತನ ಶೈಕ್ಷಣಿಕ ವರ್ಷದ ಆರಂಭ

ಶಿಕ್ಷಣದ ಪವಿತ್ರ ಪಯಣಕ್ಕೆ ಸಂಪ್ರದಾಯ ಮತ್ತು ಸಂಸ್ಕೃತಿಯ ಸೊಬಗು ಸೇರಿಸಿ, ಅಂಪಾರಿನ ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ನೂತನ ಶೈಕ್ಷಣಿಕ ವರ್ಷದ ಆರಂಭ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮಗಳು ಅತ್ಯಂತ ವೈಭವ, ಭಕ್ತಿ ಮತ್ತು ಸಂಭ್ರಮದ ವಾತಾವರಣದಲ್ಲಿ ನೆರವೇರಿದವು.
ಜೂನ್ 1ರಂದು ಶಾಲಾ ಪುನರಾರಂಭದ ಅಂಗವಾಗಿ ನುಕ್ಯಾಡಿ ಗಣಪತಿ ದೇವಸ್ಥಾನದಲ್ಲಿ ವಿಶೇಷ ಗಣಹೋಮ ನೆರವೇರಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಶಾಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಾರ್ಥಿಸಲಾಯಿತು. ನಂತರ ಶಾಲಾ ಆವರಣದಲ್ಲಿ ಶ್ರೀ ಶೃಂಗೇರಿ ಪೀಠದ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿದಾನಂಗಳಿಂದ ಕೊಡ ಮಾಡಿದ ಶ್ರೀ ಶಾರದಾಂಬೆಯ ಮೂರ್ತಿಗೆ ದೀಪ ಪ್ರಜ್ವಲನೆ ಮಾಡುವ ಮೂಲಕ ನೂತನ ಶೈಕ್ಷಣಿಕ ವರ್ಷದ ಅಧಿಕೃತ ಉದ್ಘಾಟನೆ ನಡೆಯಿತು.
ಕಾರ್ಯಕ್ರಮದಲ್ಲಿ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಕಾರ್ಯದರ್ಶಿ ನವೀನ್ ಕುಮಾರ್ ಶೆಟ್ಟಿ, ನಿರ್ದೇಶಕರಾದ ಕಿರಣ್ ಹೆಗ್ಡೆ ಹಾಗೂ ಉಮೇಶ್ ಕೊಠಾರಿ, ಸಂಜಯ ಗಾಂಧಿ ಫಂಡ್ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶಾರದಾ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಹೊಸ ಶೈಕ್ಷಣಿಕ ವರ್ಷ ಯಶಸ್ವಿಯಾಗಲೆಂದು ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಶ್ರೀಮತಿ ಚೈತ್ರಾ ಯಡಿಯಾಳ ಹಾಗೂ ಶಿಕ್ಷಕ ವೃಂದವು ವಿದ್ಯಾರ್ಥಿಗಳನ್ನು ಆರತಿ ಬೆಳಗಿ, ತಿಲಕ ಇಟ್ಟು, ಪುಷ್ಪಾರ್ಚನೆ ಮಾಡುವ ಮೂಲಕ ಹೃತ್ಪೂರ್ವಕವಾಗಿ ಸ್ವಾಗತಿಸಿ, ಶಾಲಾ ಆವರಣವನ್ನು ಹಬ್ಬದ ವಾತಾವರಣವನ್ನಾಗಿ ಪರಿವರ್ತಿಸಿದರು.
ಜೂನ್ 3ರಂದು ಶಾಲೆಯ ಪುಟಾಣಿ ಕಂದಮ್ಮಗಳಿಗಾಗಿ ಅಕ್ಷರಾಭ್ಯಾಸ ಮತ್ತು ವಿದ್ಯಾರಂಭ ಮಹೋತ್ಸವ ಅತ್ಯಂತ ಸಾಂಪ್ರದಾಯಿಕ ಹಾಗೂ ವಿಶಿಷ್ಟ ರೀತಿಯಲ್ಲಿ ಆಯೋಜಿಸಲಾಯಿತು. ಪುರೋಹಿತರಾದ ಅಂಪಾರು ಸುಬ್ರಹ್ಮಣ್ಯ ಅಡಿಗರು ಅವರ ಮಾರ್ಗದರ್ಶನದಲ್ಲಿ ಶಾಸ್ತ್ರೋಕ್ತವಾಗಿ ನಡೆದ ಈ ಕಾರ್ಯಕ್ರಮದಲ್ಲಿ, ಅರಿಶಿನ ಕೊಂಬಿನ ಸಹಾಯದಿಂದ ಅಕ್ಕಿಯ ಮೇಲೆ ಪವಿತ್ರ ಅಕ್ಷರಗಳನ್ನು ಬರೆಯುವ ಮೂಲಕ ಪುಟಾಣಿಗಳಿಗೆ ವಿದ್ಯಾರಂಭ ಮಾಡಿಸಲಾಯಿತು.
ಶೃಂಗೇರಿಯ ಶ್ರೀ ಶ್ರೀ ವಿಧುಶೇಖರ್ ಭಾರತೀ ಸನ್ನಿದಾನಾಂಗಳ ಅನುಗ್ರಹದೊಂದಿಗೆ ಶ್ರೀ ಶಾರದಾಂಬೆ ಹಾಗೂ ಶ್ರೀ ಗಣಪತಿಯ ಕೃಪಾಶೀರ್ವಾದದೊಂದಿಗೆ ನಡೆದ ಈ ಕಾರ್ಯಕ್ರಮವು ಪಾಲಕರು ಮತ್ತು ವಿದ್ಯಾರ್ಥಿಗಳಲ್ಲಿ ಅಪಾರ ಸಂತಸ ಮೂಡಿಸಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!