spot_img
Tuesday, June 9, 2026
spot_img

ಪ್ರಿಮ್ ರೋಸ್ ಫೌಂಡೇಶನ್ ಶಾಲೆಯಲ್ಲಿ ಸಂಭ್ರಮದ ಶಾಲಾ ಆರಂಭೋತ್ಸವ

ಕುಂದಾಪುರ: ಚಿರಂತನ ಎಜುಕೇಷನಲ್ ಇನ್‌ಸ್ಟಿಟ್ಯೂಷನ್ಸ್ ಮುನ್ನಡೆಸುತ್ತಿರುವ ಪ್ರಿಮ್ ರೋಸ್ ಫೌಂಡೇಶನ್ ಶಾಲೆಯಲ್ಲಿ ಜೂನ್ 8, 2026ರಂದು ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವನ್ನು ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಯಿತು.

ಶಾಲೆಗೆ ಬಂದ ಮಕ್ಕಳು ಹಾಗೂ ಅವರನ್ನು ಬಿಡಲು ಬಂದ ಪೋಷಕರು ಅತ್ಯಂತ ಸಂತಸದಿಂದ ಶಾಲಾ ಆವರಣದೊಳಗೆ ಹೆಜ್ಜೆ ಇಟ್ಟರು. ಮಕ್ಕಳನ್ನು ಸ್ವಾಗತಿಸಲು ಶಾಲೆಯನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಡಾ. ಚಿಂತನಾ ರಾಜೇಶ್, ಅಕಾಡೆಮಿಕ್ ಲೀಡ್ ವಿಲ್ಯಾ ಡಿಸಿಲ್ವಾ ಹಾಗೂ ಪ್ರಾಂಶುಪಾಲೆ ವಿನುತಾ ಬಿ. ಶೆಟ್ಟಿ ಅವರು ಉಪಸ್ಥಿತರಿದ್ದು, ಮಕ್ಕಳಿಗೆ ಮತ್ತು ಪೋಷಕರಿಗೆ ಆತ್ಮೀಯ ಸ್ವಾಗತ ಕೋರಿ, ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು.

ಶಾಲೆಯ ಮೊದಲ ದಿನದ ಪ್ರಮುಖ ಆಕರ್ಷಣೆಯಾಗಿ, ಮೆಂಟರ್‌ಗಳಾದ ಶ್ರೀಮತಿ ಮಂಜುಳಾ ಮತ್ತು ರೇಷ್ಮಾ ಅವರು ಶಾಲೆಯ ಹೊಸ್ತಿಲು ತುಳಿದ ಪುಟಾಣಿ ಮಕ್ಕಳಿಗೆ ಸಾಂಪ್ರದಾಯಿಕವಾಗಿ ಆರತಿ ಎತ್ತಿ, ತಿಲಕವನ್ನಿಟ್ಟು ಪ್ರೀತಿಯಿಂದ ಬರಮಾಡಿಕೊಂಡರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!