spot_img
Saturday, June 13, 2026
spot_img

ಮಡಾಮಕ್ಕಿ ಗ್ರಾ.ಪಂ. ಜನ ಸಂಪರ್ಕ ಸಭೆಯಲ್ಲಿ ಶಾಸಕ-ಸಂಸದರಿಂದ ಜನರ ಅಹವಾಲು ಸ್ವೀಕಾರ

 

ಕುಂದಾಪುರ, ಜೂನ್ 08: “ಸಮಸ್ಯೆ ಹೇಳಲು ತಾಲೂಕು ಕಚೇರಿಗೆ ಅಲೆಯುವುದು ಬೇಡ, ನಾವೇ ನಿಮ್ಮೂರಿಗೆ ಬರುತ್ತೇವೆ” ಎಂಬ ಧ್ಯೇಯದೊಂದಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ ಜನ ಸಂಪರ್ಕ ಕಾರ್ಯಕ್ರಮದ ಅಂಗವಾಗಿ ಸೋಮವಾರ ಮಡಾಮಕ್ಕಿ ಗ್ರಾಮ ಪಂಚಾಯಿತಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಮತ್ತು ಉಡುಪಿ-ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿದರು. ಗ್ರಾ.ಪಂ. ಸಭಾಭವನದಲ್ಲಿ ನಡೆದ ಸಭೆಯಲ್ಲಿ ಗ್ರಾಮಸ್ಥರು, ಕುಡಿಯುವ ನೀರಿನ ಕೊರತೆ, ವಸತಿ ಯೋಜನೆ ವಿಳಂಬ, ಕಂದಾಯ ತೊಡಕು, ಮೆಸ್ಕಾಂ ಬಿಲ್ ಗೊಂದಲ ಹಾಗೂ ಅರಣ್ಯ ಇಲಾಖೆಯ ಭೂಮಿ ಸಮಸ್ಯೆಗಳ ಕುರಿತು ದೂರು ಸಲ್ಲಿಸಿದರು.
ಪ್ರತಿಯೊಂದು ಅಹವಾಲನ್ನೂ ಗಂಭೀರವಾಗಿ ಆಲಿಸಿದ ಶಾಸಕರು, ಸ್ಥಳದಲ್ಲೇ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿ ತ್ವರಿತ ಪರಿಹಾರಕ್ಕೆ ಸೂಚನೆ ನೀಡಿದರು. “ಸರ್ಕಾರದ ಯೋಜನೆಗಳು ಕಡತಕ್ಕೆ ಸೀಮಿತವಾಗದೆ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು. ಹೆಬ್ರಿ ತಾ.ಪಂ. ಇಒ ಪ್ರಶಾಂತ್ ರಾವ್, ತಹಶೀಲ್ದಾರ್ ಪ್ರದೀಪ್ ಕುರುಡೇಕರ, ಪಿಡಿಒ ಹಿತಿಶ್ ಪುತ್ರನ್, ಆಡಳಿತ ಅಧಿಕಾರಿ ಜಿ.ಚಿದಾನಂದಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷರು, ಸದಸ್ಯರು, ಅಂಗನವಾಡಿ-ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಮಹಿಳೆಯರು ಹಾಗೂ ಹೆಚ್ಚಿನ ಸಂಖ್ಯೆಯ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು. ಗ್ರಾಮದ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದಾಗಿ ಶಾಸಕರು ಮತ್ತು ಸಂಸದರು ಭರವಸೆ ನೀಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!