spot_img
Monday, June 15, 2026
spot_img

ಕುಂದಾಪುರ ಬಿಜೆಪಿ ಶಕ್ತಿಕೇಂದ್ರಗಳಿಗೆ ಹೊಸ ಪದಾಧಿಕಾರಿಗಳ ಆಯ್ಕೆ

ಕುಂದಾಪುರ, ಜೂ. 05: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇಳೂರು ಮತ್ತು ತೆಕ್ಕಟ್ಟೆ ಗ್ರಾಮ ಪಂಚಾಯತ್ ಬಿಜೆಪಿ ಶಕ್ತಿಕೇಂದ್ರಗಳಿಗೆ ನೂತನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಆಯ್ಕೆ ಶುಕ್ರವಾರ ನಡೆಯಿತು.
ಕುಂದಾಪುರ ಬಿಜೆಪಿ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಶಕ್ತಿಕೇಂದ್ರಗಳ ಸಭೆಯಲ್ಲಿ ಕುಂದಾಪುರ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಭಾಗವಹಿಸಿ, ಪಕ್ಷ ಸಂಘಟನೆ ಕುರಿತು ಮಾರ್ಗದರ್ಶನ ನೀಡಿದರು.
ಶಕ್ತಿ ಕೇಂದ್ರದ ಆಯ್ಕೆಯಾದ ಪದಾಧಿಕಾರಿಗಳಾಗಿ ತೆಕ್ಕಟ್ಟೆ ಶಕ್ತಿಕೇಂದ್ರ ಅಧ್ಯಕ್ಷ ಶ್ರೀನಾಥ್ ಶೆಟ್ಟಿ,ಕಾರ್ಯದರ್ಶಿ ಗಣೇಶ, ಬೇಳೂರು ಶಕ್ತಿಕೇಂದ್ರ ಅಧ್ಯಕ್ಷ: ಸತೀಶ್ ಶೆಟ್ಟಿ, ಕಾರ್ಯದರ್ಶಿ ಅನಿಲ್ ಆಯ್ಕೆಯಾದರು.ಇದೇ ವೇಳೆ ಎರಡೂ ಶಕ್ತಿಕೇಂದ್ರಗಳ ವ್ಯಾಪ್ತಿಯ ಬೂತ್ ಅಧ್ಯಕ್ಷರ ನೇಮಕವೂ ನಡೆಯಿತು. ಸಭೆಯಲ್ಲಿ ಮಂಡಲ ನಿಕಟಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್. ಯುವಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಬೇಳೂರು ನಿಕಟ ಪೂರ್ವ ಅಧ್ಯಕ್ಷ ರವಿ ಶೆಟ್ಟಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!