spot_img
Monday, June 15, 2026
spot_img

ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ ಸಂಪನ್ನ

ಕುಂದಾಪುರ (ಜೂ.02): ಇಲ್ಲಿನ ಡಾ. ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗವು ಎಂಎಸ್ಡಿಸಿ, ಮಣಿಪಾಲ ಸಹಯೋಗದಲ್ಲಿ ಆಯೋಜಿಸಿದ್ದ ಪ್ರಾಜೆಕ್ಟ್ ಎಕ್ಸ್ಪೋ ಸೃಜನಶೀಲತೆ ಮತ್ತು ತಂತ್ರಜ್ಞಾನದ ಸಂಗಮ” ಕಾರ್ಯಕ್ರಮದ ಸಮಾರೋಪ ಸಮಾರಂಭವು ಜೂನ್ 2ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಾ.ಕೆ.ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸೃಜನಶೀಲತೆಯನ್ನು ಪ್ರೋತ್ಸಾಹಿಸುವಲ್ಲಿ ಇಂತಹ ಕಾರ್ಯಕ್ರಮಗಳು ಅಗತ್ಯ ಎಂದು ವಿವರಿಸಿದರು. ಮುಖ್ಯ ಅತಿಥಿಗಳಾಗಿ ಶ್ರೇಯಸ್ ಸುವರ್ಣ, ಸಾನ್ವಿ ಟೆಕ್ನಾಲಜೀಸ್, ಸಾಲಿಗ್ರಾಮ ಹಾಗೂ ಶ್ರೀಮತಿ ರಾಜಲಕ್ಷ್ಮಿ ಆನಂದನ್, ಸೆಂಟರ್ ಹೆಡ್ ಸ್ಕೂಲ್ ಆಫ್ ಐಟಿ ಸ್ಕಿಲ್ಸ್, ಎಂಎಸ್‌ಡಿಸಿ, ಮಣಿಪಾಲ ಭಾಗವಹಿಸಿದ್ದರು.
ಅತಿಥಿಗಳು ವಿದ್ಯಾರ್ಥಿಗಳ ನವೀನಯೋಜನೆಗಳನ್ನು ಶ್ಲಾಘಿಸಿ, ತಂತ್ರಜ್ಞಾನ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು. ಸೃಜನಶೀಲತೆ, ನವೀನಚಿಂತನೆ, ತಾಂತ್ರಿಕ ಕೌಶಲ್ಯ ಹಾಗೂ ಪರಿಣಾಮಕಾರಿ ಸಂವಹನ ಕೌಶಲ್ಯಗಳು ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸಲು ಅತ್ಯಗತ್ಯವೆಂದು ತಿಳಿಸಿದರು. ವಿದ್ಯಾರ್ಥಿಗಳು ನಿರಂತರ ಕಲಿಕೆಯ ಮೂಲಕ ತಮ್ಮ ಜ್ಞಾನವನ್ನು ನವೀಕರಿಸಿಕೊಳ್ಳಬೇಕು ಹಾಗೂ ಉದ್ಯಮಶೀಲ ಮನೋಭಾವವನ್ನು ಬೆಳೆಸಿಕೊಳ್ಳಬೇಕು, ಈ ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ ಒಳ್ಳೆಯ ವೇದಿಕೆ ಎಂದು ಸಲಹೆ ನೀಡಿದರು. ಕಾರ್ಯಕ್ರಮದ ಸಂಯೋಜಕರಾದ ಪ್ರಣಮ್ ಆರ್ ಹಾಗೂ ಮೇಘಾ ಉಪಸ್ಥಿತರಿದ್ದರು. ಪ್ರಾಜೆಕ್ಟ್ ಎಕ್ಸ್ಪೋ ದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ವಿಭಾಗದ ಸಹ ಪ್ರಾಧ್ಯಾಪಕರಾದ ಗಿರಿರಾಜ್ ಭಟ್ ಸ್ವಾಗತಿಸಿದರು, ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಪ್ರಾಸ್ತಾವಿಸಿದರು.ವಿಭಾಗದ ಸಹಾಯಕ ಪ್ರಾಧ್ಯಾಪಕರುಗಳಾದ ಶ್ರೀಮತಿ ಜಯಲಕ್ಷ್ಮಿಕೆ. ಅತಿಥಿಗಳನ್ನು ಪರಿಚಯಿಸಿ, ಹರೀಶ್ ಕಾಂಚನ್ ವಿಜೇತರ ಪಟ್ಟಿ ವಾಚಿಸಿ, ಶ್ರೀಮತಿ ವಿಲ್ಮಾಶೆರಲ್ ವಂದಿಸಿ, ಶ್ರೀಮತಿ ನಿರ್ಮಲ ಬಿಲ್ಲವ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ರಿಶಿತಾ ಪ್ರಾರ್ಥಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!