spot_img
Friday, June 12, 2026
spot_img

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಜೋಸೆಪ್ ವಿಜಯ್| ಬೆಳ್ಳಿ ಖಡ್ಗ ಸಮರ್ಪಣೆ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಜೋಸೆಪ್ ವಿಜಯ್ ಜೂನ್ 12 ಶುಕ್ರವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಭಕ್ತಿಯಿಂದ ಮೂಕಾಂಬಿಕೆಗೆ ಒಂದು ಕೆಜಿ ೬೦೦ ಗ್ರಾಂ ತೂಕದ ಬೆಳ್ಳಿಯ ಖಡ್ಗ ಸಮರ್ಪಣೆ ಮಾಡಿದರು.

ಸಾಂಪ್ರಾದಾಯಿಕ ಉಡುಪಿನಲ್ಲಿ ದೇವಸ್ಥಾನ ಪ್ರವೇಶ ಮಾಡಿದ ಅವರನ್ನು ದೇವಸ್ಥಾನದ ವತಿಯಿಂದ ಸ್ವಾಗತಿಸಿಕೊಳ್ಳಲಾಯಿತು. ಧ್ವಜಾಸ್ತಂಭಕ್ಕೆ ನಮಸ್ಕರಿಸಿ, ದೇವಿಯ ದರ್ಶನ ಮಾಡಿ ಪೂಜೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಪೂಜೆ ನಡೆಯಿತು.

ಅತ್ಯಂತ ಸರಳವಾಗಿ ಕಂಡ ವಿಜಯ್ ಅವರು ಸಣ್ಣಗೆ ಮಳೆ ಜಿನುಗುತ್ತಿದ್ದರೂ ತಾನೆ ಕೊಡೆ ಹಿಡಿದುಕೊಂಡು ನಡೆದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಅವರನ್ನು ಗೌರವಿಸಲಾಯಿತು. ಪೂಜೆ ಮುಗಿಸಿ ಹೊರ ಬಂದ ಅವರು ಅಭಿಮಾನಿಗಳಿಗೆ ಕೈ ಮುಗಿದು ಕೃತಜ್ಞತೆ ಸಲ್ಲಿಸಿದರು.

ತಮಿಳುನಾಡು ಮುಖ್ಯಮಂತ್ರಿ, ಪ್ರಸಿದ್ಧ ನಟ ವಿಜಯ ದಳಪತಿ ಆಗಮನದ ಹಿನ್ನೆಲೆಯಲ್ಲಿ ಕಳೆದ ಸಾಕಷ್ಟು ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಆದರೂ ಕೂಡಾ ಮಧ್ಯಾಹ್ನ ಒಂದು ಗಂಟೆಯಿಂದಲೇ ವಿಜಯ ನೋಡಲು ಸಾಕಷ್ಟು ಸಂಖ್ಯೆಯ ಅಭಿಮಾನಿಗಳು ಆಗಮಿಸಿದ್ದರು. ಕೊಲ್ಲೂರಿನ ರಾಜಮಾರ್ಗದ ಇಕ್ಕೆಲಗಳಲ್ಲಿ ನಿಂತು ವೀಕ್ಷಿಸಿದರು. ಕೆಲವು ಅಭಿಮಾನಿಗಳು ಕುಣಿದು ಕುಪ್ಪಳಿಸಿದರು. ಕೆಲವರು ಟಿವಿಕೆ ಪಕ್ಷದ ಚಿಹ್ನೆ ಪ್ರದರ್ಶಿಸಿ ಜಯಘೋಷ ಮೊಳಗಿಸಿದರು.

ವಿಜಯ ಮುಖ್ಯಮಂತ್ರಿಯಾಗಿ ಇದೇ ಮೊದಲ ಬಾರಿಗೆ ಕೊಲ್ಲೂರಿಗೆ ಆಗಮಿಸಿದ್ದಾರೆ. ಮಂಗಳೂರು ತನಕ ವಿಶೇಷ ವಿಮಾನದಲ್ಲಿ ಆಗಮಿಸಿ ಬಳಿಕ ರಸ್ತೆ ಮಾರ್ಗದ ಮೂಲಕ ಕೊಲ್ಲೂರಿಗೆ ಆಗಮಿಸಿದರು. ರಸ್ತೆಯ ಉದ್ದಕ್ಕೂ ಅಭಿಮಾನಿಗಳು, ಕುತೂಹಲಿಗಳು ಕೈಬೀಸಿದರು. ಮಾರ್ಗ ಮಧ್ಯದಲ್ಲಿ ಅಲ್ಲಲ್ಲಿ ವಿಜಯ್ ಕಾರಿನ ಗ್ಲಾಸ್ ಇಳಿಸಿ ಜನತೆಗೆ ಪ್ರೀತಿಯಿಂದ ಕೈ ಬೀಸುತ್ತಿರುವುದು ಕಂಡು ಬಂತು.

ದೇವಸ್ಥಾನದ ವತಿಯಿಂದ ಜೋಸೆಪ್ ವಿಜಯ್ ಅವರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಾಬು ಶೆಟ್ಟಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!