spot_img
Saturday, June 13, 2026
spot_img

ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ನೂತನ ವಿದ್ಯಾರ್ಥಿಗಳ ಪ್ರತಿಭಾನ್ವೇಷಣಾ ಕಾರ್ಯಕ್ರಮ

ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿಯಲ್ಲಿ 2026-2027 ನೇ ವರ್ಷದಲ್ಲಿ ದಾಖಲಾತಿ ಪಡೆದುಕೊಂಡು ಅಧ್ಯಯನಕ್ಕೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳಲ್ಲಿ ಸುಪ್ತವಾದ ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ಪ್ರತಿಭಾನ್ವೇಷಣಾ ಕಾರ್ಯಕ್ರಮವನ್ನು ದಿನಾಂಕ 10-06-2026 ರಂದು ನಡೆಸಲಾಯಿತು.
ವಿದ್ಯಾರ್ಥಿಗಳು ಮನೆಯನ್ನು ತೊರೆದು ಪಾಠ ಶಾಲೆಗೆ ಸೇರಿದ ದಿನಗಳಲ್ಲಿ ಮನೆಯ ನೆನಪಿನಲ್ಲಿರುತ್ತಾರೆ. ತಮಗೆ ಅವಕಾಶಗಳನ್ನು ಅರಸುತ್ತಿರುತ್ತಾರೆ. ತಮ್ಮನ್ನು ಗುರುತಿಸಿಕೊಳ್ಳಲು ಹಾತೊರೆಯುತ್ತಿರುತ್ತಾರೆ. ಅವರಿಗೆ ಸೂಕ್ತ ವೇದಿಕೆಯನ್ನು ಒದಗಿಸಬೇಕಾದ ಸಹಪಾಠಿ-ಶಿಕ್ಷಕವೃಂದವೂ ಅವರ ಸುಪ್ತಪ್ರತಿಭೆಗಳ ಅನಾವರಣವನ್ನು ಬಯಸುತ್ತಿರುತ್ತಾರೆ. ಇದೆಲ್ಲವನ್ನು ಪರಿಗಣಿಸಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರರು ಪ್ರತಿಭಾನ್ವೇಷಣಾ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಮಕ್ಕಳನ್ನು ಲವಲವಿಕೆಯಿಂದ ಕೂಡುವಂತೆ ಮಾಡಲು ಈ ಕಾರ್ಯಕ್ರಮ ಬಹಳ ಸಹಕಾರಿಯಾಗಿತ್ತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗಾಂಧಾರಿ ವಿದ್ಯೆ, ಅಬಾಕಸ್, ಸಂಗೀತ, ನೃತ್ಯ, ಶ್ಲೋಕಪಠಣ, ಯೋಗ, ಭಜನೆ, ಏಕಪಾತ್ರಾಭಿನಯ, ಸಮೂಹಗಾಯನ, ಕಿರುನಾಟಕ, ಸಮೂಹನೃತ್ಯವೇ ಮೊದಲಾದ ತಮ್ಮ ಆಸಕ್ತಿಯ ಹವ್ಯಾಸಿ ಚಟುವಟಿಕೆಗಳ ಪ್ರದರ್ಶನವನ್ನು ನಡೆಸಿದರು. 8 ನೇ ತರಗತಿಯ ಕುಮಾರಿ ಸೌಜನ್ಯಾ, ಕುಮಾರಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ ಕಾರ್ಯಕ್ರಮವನ್ನು ಆಮೂಲಾಗ್ರವಾಗಿ ಗಮನಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ, ಪ್ರೋತ್ಸಾಹಿಸಿದರು. ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರೂ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!