spot_img
Wednesday, July 29, 2026
spot_img

ಕೆ.ಪಿ.ಎಸ್ ವಂಡ್ಸೆ-ನೆಂಪು: ಉಚಿತ ನೋಟ್ ಪುಸ್ತಕ ವಿತರಣೆ

ಕುಂದಾಪುರ: ಹಳೆ ವಿದ್ಯಾರ್ಥಿಗಳ ಸಂಘ (ರಿ.) ಕರ್ನಾಟಕ ಪಬ್ಲಿಕ್ ಸ್ಕೂಲ್, ವಂಡ್ಸೆ-ನೆಂಪು ಇಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಜೂ.11ರಂದು ನಡೆಯಿತು.

ಶಾಲೆಯ ಹಳೆ ವಿದ್ದ್ಯಾರ್ಥಿ, ಭರತ ಫೌಂಡೇಶನ್ ಮೈಸೂರು, ಇದರ ಅಧ್ಯಕ್ಷರು ಆಗಿರುವ ಹಂದಕುಂದ ಭರತ್ ಶೆಟ್ಟಿ ಹಾಗೂ ಅರ್ಚನಾ ಭರತ್ ಶೆಟ್ಟಿಯವರು ಸತತ ನಾಲ್ಕನೇ ವರ್ಷ ಕೊಡಮಾಡಿದ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನೆಂಪು ಸಂತೋಷ್ ಕುಮಾರ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಿ.ಎನ್ ಶೆಟ್ಟಿ ಬಗ್ವಾಡಿ ಇವರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ದಾನಿಗಳಾದ ಹಂದಕುಂದ ಭರತ್ ಶೆಟ್ಟಿ ದಂಪತಿ ಗಳಿಗೆ ಅಭಿನಂದನೆ ಸಲ್ಲಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಾಂಶುಪಾಲರಾದ ಕೃಷ್ಣರಾಜ್ ಭಟ್, ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಶ್ರೀಧರ್ ಭಟ್, ಕುಪ್ಪಯ್ಯ ಮರಾಠಿ, ರಾಘವೇಂದ್ರ ನೆಂಪು ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಅಧ್ಯಾಪಕ ರವಿರಾಜ್ ಶೆಟ್ಟಿ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಅಧ್ಯಾಪಕ ಗಣೇಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಗಣಿತ ಶಿಕ್ಷಕ ಸೀತಾರಾಮ ಮೊಗವೀರ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!