spot_img
Saturday, June 13, 2026
spot_img

ಗಂಗೊಳ್ಳಿ: ಉಚಿತ ನೋಟ್ಸ್ ಪುಸ್ತಕ ವಿತರಣೆ

ಕುಂದಾಪುರ : ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತ್ತು ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ ಇದರ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳನ್ನು ಗಂಗೊಳ್ಳಿಯ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
ಮಲ್ಯರಬೆಟ್ಟು ಅಂಗನವಾಡಿಯ ಪ್ರಾರಂಭೋತ್ಸವವನ್ನು ಅಂಗನವಾಡಿಯ ಬಾಲವಿಕಾಸ ಸಮಿತಿ ಅಧ್ಯಕ್ಷೆ ಅನಿತಾ ಖಾರ್ವಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಅಂಗನವಾಡಿಗೆ ಆಗಮಿಸಿದ ಪುಟಾಣಿಗಳಿಗೆ ತಿಲಕವನ್ನಿಟ್ಟು ಆರತಿ ಬೆಳಗಿಸಿ ಸಿಹಿತಿಂಡಿ ನೀಡಿ ಸ್ವಾಗತಿಸಲಾಯಿತು. ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ.ಗೋಪಾಲ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ಜಯಂತಿ ಖಾರ್ವಿ ಅವರು ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಿ ಶುಭ ಹಾರೈಸಿದರು. ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಸಮಿತ್ರಾ ಜಿ., ಜಿ.ಈಶ್ವರ, ವೀಣಾ, ಶೋಭಾ, ನಿಹಾಪ್, ರೋಶನಮೀನ್ ಚೌಗುಲೆ, ಅಬೀರಾ, ಕೃಷ್ಣ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.
ಅನಿತಾ ಖಾರ್ವಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ರೇಖಾ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು. ಅಂಗನವಾಡಿ ಸಹಾಯಕಿ ಶಾಂತಿ ಖಾರ್ವಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!