spot_img
Saturday, June 13, 2026
spot_img

ಗಂಗೊಳ್ಳಿ: ಹಿರಿಯ ಶಾಖಾ ವ್ಯವಸ್ಥಾಪಕರ ಬೀಳ್ಕೊಡುಗೆ

ಕುಂದಾಪುರ : ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯಲ್ಲಿ ಹಿರಿಯ ಶಾಖಾ ವ್ಯವಸ್ಥಾಪಕರಾಗಿ ಮೂರು ವರ್ಷ ಸೇವೆ ಸಲ್ಲಿಸಿ ಮಣಿಪಾಲದ ಜಾಗೃತ ದಳಕ್ಕೆ ವರ್ಗಾವಣೆಗೊಂಡ ವಾಸು ದೇವಾಡಿಗ ಅವರನ್ನು ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯ ಪರವಾಗಿ ಶುಕ್ರವಾರ ಸನ್ಮಾನಿಸಿ ಬೀಳ್ಕೊಡಲಾಯಿತು.
ಗ್ರಾಹಕರಾದ ಎನ್.ಸದಾಶಿವ ನಾಯಕ್, ಜಿ.ವೆಂಕಟೇಶ ನಾಯಕ್, ಜಿ.ವೆಂಕಟೇಶ ಶೆಣೈ ಮತ್ತು ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ಜಯಂತಿ ಖಾರ್ವಿ ಅವರು ವಾಸು ದೇವಾಡಿಗ ಅವರನ್ನು ಶಾಖೆಯ ಪರವಾಗಿ ಸನ್ಮಾನಿಸಿ ಅಭಿನಂದಿಸಿದರು. ಗ್ರಾಹಕರಾದ ದಿನಕರ ಶೆಟ್ಟಿ ಮತ್ತು ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷ ರಾಘವೇಂದ್ರ ಮಡಿವಾಳ ಅವರು ವಾಸು ದೇವಾಡಿಗ ಅವರ ಸೇವೆಯನ್ನು ಸ್ಮರಿಸಿ ಶುಭ ಹಾರೈಸಿದರು.
ಶಾಖೆಯ ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು. ಪ್ರಧಾನ ವ್ಯವಸ್ಥಾಪಕ ಮಂಜುನಾಥ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!