spot_img
Saturday, June 13, 2026
spot_img

ಸರಕಾರಿ ಪ್ರೌಢಶಾಲೆ ಹೆಸ್ಕತ್ತೂರು ಬೀಳ್ಕೊಡುಗೆ ಕಾರ್ಯಕ್ರಮ

kundapura: ಹೆಸ್ಕತ್ತೂರು ಸರಕಾರಿ ಪ್ರೌಢಶಾಲೆಯಲ್ಲಿ ಸಂಸ್ಥೆಯಲ್ಲಿ ಗಣಿತ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಉದಯ್ ಕುಮಾರ್ ಶೆಟ್ಟಿ ಇವರಿಗೆ ಸಹಶಿಕ್ಷಕ ಹುದ್ದೆಯಿಂದ ಪ್ರೌಢಶಾಲಾ ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ ದೊರೆತು ಸರಕಾರಿ ಪ್ರೌಢಶಾಲೆ ಕೆದೂರು ಇಲ್ಲಿಗೆ ನೇಮಕಗೊಂಡಿದ್ದು, ಹಾಗೂ ಸಂಸ್ಥೆಯಲ್ಲಿ ಸಮಾಜ ವಿಜ್ಞಾನ ವಿಷಯದ ಶಿಕ್ಷಕಿಯಾಗಿದ್ದ ವೀಣಾ ವೆಂಕಟೇಶ ಮೇಸ್ತ ಇವರು ವರ್ಗಾವಣೆಗೊಂಡು ಕೆಪಿ‌ಎಸ್ ಹಿರಿಯಡ್ಕಕ್ಕೆ ನೇಮಕಗೊಂಡಿದ್ದು ಅವರನ್ನು ಬೀಳ್ಕೊಡುವ ಕಾರ್ಯಕ್ರಮ ಸಂಸ್ಥೆಯಲ್ಲಿ ಜರುಗಿತು.

ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿಯ ಅಧ್ಯಕ್ಷರಾದ ಪುರುಷೋತ್ತಮ ದೇವಾಡಿಗ ವಹಿಸಿದ್ದರು. ಕೊರ್ಗಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಪಲ್ಲವಿ, ಎಸ್.ಡಿ.ಎಂ.ಸಿ ಸದಸ್ಯೆ ಕವಿತಾ, ಐರೋಡಿ ಮಂಜುನಾಥ ಕುಲಾಲ್ ಯಡ್ತಾಡಿ, ಮುಖ್ಯ ಶಿಕ್ಷಕ ಅಬ್ದುಲ್ ರವೂಫ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎಸ್.ಡಿ.ಎಂ.ಸಿ ಸದಸ್ಯೆ ಜ್ಯೋತಿ, ಆಶಾ ಕಾರ್ಯಕರ್ತೆ ಸಾಧು, ಅಂಗನವಾಡಿ ಶಿಕ್ಷಕಿ ಶರ್ಮಿಳ, ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದ ದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಮಾತನಾಡುತ್ತಾ, ಪದೋನ್ನತಿ ಹೊಂದಿದ ಶಿಕ್ಷಕ ಹಾಗೂ ವರ್ಗಾವಣೆಗೊಂಡ ಶಿಕ್ಷಕಿ ಅತ್ಯುತ್ತಮ ತರಗತಿ ಶಿಕ್ಷಕರಾಗಿದ್ದರು, ವಿದ್ಯಾರ್ಥಿಗಳ ಏಳಿಗೆಗಾಗಿ ಅತಿ ಹೆಚ್ಚು ಸಮಯವನ್ನು ಬೋಧನಾ, ಕಲಿಕಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು ಎಂದು ಶ್ಲಾಘಿಸಿದರು. ಬೀಳ್ಕೊಳ್ಳುವ ಶಿಕ್ಷಕರು ಮಾತನಾಡುತ್ತಾ ತಮ್ಮ ಕರ್ತವ್ಯದ ಅವಧಿಯಲ್ಲಿ ಈ ಸಂಸ್ಥೆಯು ಅತ್ಯಂತ ಸ್ಮರಣೀಯ ಅನುಭವವನ್ನು ನೀಡಿದ ಶ್ರೇಷ್ಠ ಸಂಸ್ಥೆ ಎಂಬುದಾಗಿ ಹಾಡಿ ಹೊಗಳಿದರು.

ಮುಖ್ಯ ಶಿಕ್ಷಕ ಅಬ್ದುಲ್ ರವೂಫ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಸ್.ಡಿ.ಎಂ.ಸಿಯ ಅಧ್ಯಕ್ಷರಾದ ಪುರುಷೋತ್ತಮ ದೇವಾಡಿಗ ಇವರು ಬೀಳ್ಕೊಳ್ಳುವ ಶಿಕ್ಷಕರಿಗೆ ನೆನಪಿನ ಕಾಣಿಕೆಗಳನ್ನು ನೀಡಿದರು. ಸಂಸ್ಥೆಯಿಂದ ಬೀಳ್ಕೊಂಡ ಶಿಕ್ಷಕರು ವಿದ್ಯಾರ್ಥಿಗಳಿಗೆ ಲೇಖನಿಯನ್ನು ಮತ್ತು ಸಿಹಿಯನ್ನು ಹಂಚಿದರು. ಆಂಗ್ಲ ಭಾಷಾ ಶಿಕ್ಷಕ ಗೋಪಾಲ ಸೋಮಯಾಜಿ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಶಿಕ್ಷಕ ವೆಂಕಟೇಶ ವಂದಿಸಿದರು. ಚಿತ್ರಕಲಾ ಶಿಕ್ಷಕರಾದ ಸುಂದರ್ ತೋಡಾರ್ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!