spot_img
Monday, June 15, 2026
spot_img

ಜೂ.17ಕ್ಕೆ ಸಿದ್ಧಾಪುರದಲ್ಲಿ ಕಮಲಶಿಲೆ ಗ್ರಾಮೀಣ ವಿಕಾಸ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆ

ಸಿದ್ದಾಪುರ: ಕುಂದಾಪುರ ತಾಲೂಕು ಸಿದ್ಧಾಪುರದ ಮಂಜುನಾಥ ಕಾಂಪ್ಲೆಕ್ಸ್‌ನಲ್ಲಿ ಜೂನ್ 17 ಬುಧವಾರ ಕಮಲಶಿಲೆ ಗ್ರಾಮೀಣ ವಿಕಾಸ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆಗೊಳ್ಳಲಿದೆ.

ಸಂಪೂರ್ಣ ಹವಾನಿಯಂತ್ರಿತ ಹಾಗೂ ಗಣಕೀಕೃತ ಸೌಲಭ್ಯಗಳನ್ನು ಹೊಂದಿರುವ ಕಮಲಶಿಲೆ ಗ್ರಾಮೀಣ ವಿಕಾಸ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯನ್ನು ಅಂದು ಬೆಳಿಗ್ಗೆ 10-30ಕ್ಕೆ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಚ್ಚಿದಾನಂದ ಚಾತ್ರ ದೀಪ ಬೆಳಗಿಸುವ ಮೂಲಕ ಉದ್ಘಾಟನೆಗೊಳಿಸಲಿದ್ದಾರೆ.

ಶಾಸಕ ಗುರುರಾಜ ಗಂಟಿಹೊಳೆ ಕಛೇರಿ ಉದ್ಘಾಟನೆ ಮಾಡಲಿದ್ದಾರೆ. ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಭದ್ರತಾ ಕೊಠಡಿ ಉದ್ಘಾಟನೆ ನೆರವೇರಿಸಲಿದ್ದಾರೆ. ಬೀಜಾಡಿ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷರಾದ ಅಶೋಕ ಪೂಜಾರಿ ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ರಾಜು ಪೂಜಾರಿ, ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರದೀಪ ಯಡಿಯಾಳ ಷೇರುಪತ್ರ ಬಿಡುಗಡೆ ಮಾಡಲಿದ್ದಾರೆ. ಉದ್ಯಮಿಗಳಾದ ಡಿ.ಗೋಪಿನಾಥ ಕಾಮತ್ ಸ್ವ-ಸಹಾಯ ಗುಂಪು ಉದ್ಘಾಟನೆ ಮಾಡಲಿದ್ದಾರೆ. ಕಟ್ಟಡ ಮಾಲಿಕರು ಹಾಗೂ ಉದ್ಯಮಿಗಳಾದ ಅನಂದ ಶೆಟ್ಟಿ ಕೊಡ್ಲಾಡಿ ಸಾಲಪತ್ರ ಬಿಡುಗಡೆ ಮಾಡಲಿದ್ದಾರೆ. ಉಳ್ಳೂರು-೭೪ ಶ್ರೀ ಬನಶಂಕರಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ಸಂಜೀವ ಶೆಟ್ಟಿ ಸಂಪಿಗೇಡಿ ಆಡಳಿತ ಮಂಡಳಿ ಕಛೇರಿ ಉದ್ಘಾಟನೆ ಮಾಡಲಿದ್ದಾರೆ. ಪರ್ಸನಲ್ ಗ್ರೋತ್ ಮತ್ತು ಮ್ಯಾನಿಷ್ಟೇಷನ್ ಕೋಚ್ ಕಟಪಾಡಿ ಇದರ ಕೆ.ಮಹೇಶ ಶೆಣೈ ಸಹಕಾರಿ ಲಾಂಛನ ಬಿಡುಗಡೆ ಮಾಡಲಿದ್ದಾರೆ. ಕಾಂಡಿಮೆಂಟ್ಸ್ ಮಾಲಕರ ಸಂಘ ಬೆಂಗಳೂರು ಇದರ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ ಪಾಸ್ ಬುಕ್ ಬಿಡುಗಡೆ ಮಾಡಲಿದ್ದಾರೆ. ಸಹಕಾರಿ ಅಧಿಕಾರಿಗಳು, ಗಣ್ಯರು, ಉದ್ಯಮಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಸಂಘದ ಅಧ್ಯಕ್ಷರಾದ ಸುಬ್ಬಯ್ಯ ಪೂಜಾರಿ, ಉಪಾಧ್ಯಕ್ಷರಾದ ನಾಗರಾಜ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಉಷಾ ಹಾಗೂ ನಿರ್ದೇಶಕ ಮಂಡಳಿಯ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!