spot_img
Monday, June 15, 2026
spot_img

ಗಂಗೊಳ್ಳಿ: ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪುರುಷೋತ್ತಮ ವೃತ

ಕುಂದಾಪುರ : ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪುರುಷೋತ್ತಮ ಮಾಸದ ಅಂಗವಾಗಿ ನಡೆಯುತ್ತಿರುವ ಮಾಸಾವಧಿ ಅಖಂಡ ಭಜನಾ ಮಹೋತ್ಸವದ ಸಂದರ್ಭ ದೇವರ ಪ್ರೀತ್ಯರ್ಥ ಸಮಾಜ ಅಭಿವೃದ್ಧಿ ಹಾಗೂ ಲೋಕ ಕಲ್ಯಾಣಾರ್ಥ ಪುರುಷೋತ್ತಮ ವೃತ ಭಾನುವಾರ ನಡೆಯಿತು.
ಬೆಳಿಗ್ಗೆ ದೇವತಾ ಪ್ರಾರ್ಥನೆಯೊಂದಿಗೆ ಪುರುಷೋತ್ತಮ ವೃತದ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡು, ಯಮುನಾ ಪೂಜನ, ಕಲಶ ಪೂರಣ, ಕಲಶ ಪೂಜೆ, ಮಧ್ಯಾಹ್ನ ದೇವರಿಗೆ ಮಹಾಪೂಜೆ, 33 ನಮಸ್ಕಾರ, ತೀರ್ಥ ಪ್ರಸಾದ ವಿತರಣೆ ಮಹಾಸಮಾರಾಧನೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಿತು. ದೇವಳದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ಮತ್ತು ತಾಂತ್ರಿಕ ಜಿ.ವಸಂತ ಭಟ್ ನೇತೃತ್ವದಲ್ಲಿ ಪುರೋಹಿತರಿಂದ ಪುರುಷೋತ್ತಮ ವೃತದ ಧಾರ್ಮಿಕ ವಿಧಿವಿಧಾನಗಳು ಸಂಪನ್ನಗೊಂಡಿತು. ದೇವಳದ ಆಡಳಿತ ಮಂಡಳಿ ಸದಸ್ಯರು, ಅರ್ಚಕರು, ಪುರೋಹಿತರು, ಸೇವಾದಾರರು, ಮಹಿಳಾ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಊರ ಪರ ಊರಿನ ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!