spot_img
Monday, June 15, 2026
spot_img

ಕುಂದಾಪುರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ: ಜಿಲ್ಲಾ ಪದಾಧಿಕಾರಿಗಳ ಸಭೆ

 

ಕುಂದಾಪುರ, ಜೂನ್ 14: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಭಾನುವಾರ ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಮತ್ತು ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ವಿಜಯೇಂದ್ರ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಬಳಿಕ ನಗರದ ಖಾಸಗಿ ಹೋಟೆಲ್‌ನಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ಹರೀಶ್ ಪೂಂಜ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹೆರ್ಗ ದಿನಕರ ಶೆಟ್ಟಿ, ಶ್ರೀಕಾಂತ್ ನಾಯಕ್, ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್, ಬೈಂದೂರು ಮಂಡಲ ಅಧ್ಯಕ್ಷೆ ಅನಿತಾ ಮರವಂತೆ, ಇತರ ಪ್ರಮುಖರು ಮಂಗಳೂರು ಪ್ರಭಾರಿ ಭಾರತೀಶ್, ಮಾಜಿ ಪ್ರಭಾರಿ ಉದಯಕುಮಾರ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಶಂಕರ ಅಂಕದಕಟ್ಟೆ, ಸಂಪತ್ ಕುಮಾರ್ ಶೆಟ್ಟಿ ಶಾನಾಡಿ, ರಾಜೇಶ್ ಕಾವೇರಿ, ಕಾಡೂರು ಸುರೇಶ್ ಶೆಟ್ಟಿ, ಸದಾನಂದ ಬಳ್ಕೂರು, ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಶಿಲ್ಪಾ ಜಿ. ಸುವರ್ಣ ಹಾಗೂ ಉಡುಪಿ ಜಿಲ್ಲೆ ಮತ್ತು ಕುಂದಾಪುರ ಮಂಡಲದ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!