spot_img
Tuesday, June 16, 2026
spot_img

ಉಡುಪಿ ಜಿಲ್ಲಾ ರಸಾಯನಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ರಸಾಯನಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ 13-06-2026 ರಂದು ನಡೆಯಿತು.
ಕಳೆದ ಶೈಕ್ಷಣಿಕ ವರ್ಷದಲ್ಲಿ ಪ್ರಶ್ನೆ ಪತ್ರಿಕೆ ನೀಲ ನಕಾಶೆ ಹಾಗೂ ಮಾದರಿ ಪ್ರಶ್ನೆ ಪತ್ರಿಕೆ ರಚನಾ ಸಮಿತಿಯ ಸದಸ್ಯರಾಗಿದ್ದ
ಗಿರೀಶ ಸಿ, ಅಸಿಸ್ಟೆಂಟ್ ಡೈರೆಕ್ಟರ್ ಕಂಪ್ಯೂಟರ್ ಸೆಲ್, ಕೆ ಎಸ್ ಇ.ಎ.ಬಿ ಬೆಂಗಳೂರು ಇವರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ವಿವಿಧ ಖಾಸಗಿ ಪದವಿ ಪೂರ್ವ ಕಾಲೇಜುಗಳ ಸುಮಾರು 45 ರಸಾಯನಶಾಸ್ತ್ರ ವಿಭಾದ ಮುಖ್ಯಸ್ಥರು ಭಾಗವಹಿಸಿದ್ದರು. ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಪನಿರ್ದೇಶಕರಾದ ಮಾರುತಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಡಾ. ದಯಾನಂದ ಪೈ ವಹಿಸಿದ್ದರು. ಸಂಘದ ಉಪಾಧ್ಯಕ್ಷರಾದ ಶ್ರೀಮತಿ ರೂಪ ಎಲ್ ಭಟ್, ಆದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಸಂಜೀವ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ ಇ ಓ ದಿನೇಶ್ ಎಂ ಕೊಡವೂರು, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕರಾದ ಸುರತ್ ಕುಮಾರ್ ಸ್ವಾಗತಿಸಿ, ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕ ಡಾಕ್ಟರ್ ಪ್ರಜ್ವಲ್ ಕುಲಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!