spot_img
Tuesday, June 16, 2026
spot_img

ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಯಂಗಡಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ 

 

ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ 2026-27ನೇ ಶೈಕ್ಷಣಿಕ ವರ್ಷದಲ್ಲಿ ದಾಖಲಾದ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಜೂನ್ 13, 2026ರ ಶನಿವಾರದಂದು ನಡೆಯಿತು.
ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂಗೀತ, ನೃತ್ಯ, ಶ್ಲೋಕ ಪಠಣ, ಭಾಷಣ, ಏಕಪಾತ್ರಾಭಿನಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರದರ್ಶಿಸಿದರು.
ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಹೊರತರುವುದರ ಜೊತೆಗೆ ವೇದಿಕೆಯ ಭಯವನ್ನು ನಿವಾರಿಸಿ, ಆತ್ಮವಿಶ್ವಾಸ ಹಾಗೂ ಸೃಜನಶೀಲತೆಯನ್ನು ಬೆಳೆಸಲು ಸಹಕಾರಿಯಾಯಿತು. ವಿದ್ಯಾರ್ಥಿಗಳು ಉತ್ಸಾಹ ಹಾಗೂ ಸಂತೋಷದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶೈಕ್ಷಣಿಕ ಸಲಹೆಗಾರರಾದ ಸುಜಾತಾ ಸದಾರಾಮ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಮಾಲಿನಿ, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಾಲೆಯ ವಿದ್ಯಾರ್ಥಿಗಳಾದ ಅದ್ವೈತ, ಸಾತ್ವಿಕ್ ಹಾಗೂ ಚಿನ್ಮಯಿಯವರು ಯಶಸ್ವಿಯಾಗಿ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!