spot_img
Tuesday, June 16, 2026
spot_img

ಪ್ರಜಾಪ್ರಭುತ್ವದ ಮೌಲ್ಯಗಳನ್ನು ಸಾರಿದ ಶಾಲಾ ಸಂಸತ್ ಚುನಾವಣೆ

 

ಕುಂದಾಪುರ, ಜೂ :16 ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಂ.ಎಂ. ಪ್ರಾಥಮಿಕ ಹಾಗೂ ವಿ.ಕೆ.ಆರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ವಿದ್ಯಾರ್ಥಿ ಸಂಸತ್ತಿಗೆ ವಿದ್ಯಾರ್ಥಿ ನಾಯಕರ ಆಯ್ಕೆಗಾಗಿ ಚುನಾವಣೆ ನಡೆಯಿತು.ವಿದ್ಯಾರ್ಥಿಗಳು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಪ್ರತಿನಿಧಿಗಳನ್ನು ಆಯ್ಕೆಮಾಡಿದರು. ಈ ಚುನಾವಣೆಯ ಮೂಲಕ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಅರಿವು ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶವನ್ನು ಶಾಲೆ ಹೊಂದಿತ್ತು. ವಿಕೆಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ನಾಯಕನಾಗಿ ಅನೀಶ್, ಉಪನಾಯಕನಾಗಿ ಸದ್ವಿನ್ ಶೆಟ್ಟಿ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕನಾಗಿ ಭರತ್ ಉಪನಾಯಕನಾಗಿ ಆರ್ಯನ್ ಕೆ ಪೂಜಾರಿ ಆಯ್ಕೆಯಾದರು. ಸಂಸ್ಥೆಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಉಪ ಪ್ರಾಂಶುಪಾಲೆ ಶ್ರೀಮತಿ ಶುಭಾ ಕೆ.ಎನ್ ಅವರ ಮಾರ್ಗದರ್ಶನದಲ್ಲಿ ಶಿಕ್ಷಕರು ಸಂಪೂರ್ಣ ವ್ಯವಸ್ಥೆಯನ್ನು ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!