spot_img
Thursday, June 18, 2026
spot_img

ಗಂಗೊಳ್ಳಿ: 2026-27ನೇ ಸಾಲಿನ ಮಹಿಳಾ ಗ್ರಾಮಸಭೆ

ಕುಂದಾಪುರ : ಗ್ರಾಮ ಪಂಚಾಯತ್ ಗಂಗೊಳ್ಳಿ ಇದರ 2026-27ನೇ ಸಾಲಿನ ಮಹಿಳಾ ಗ್ರಾಮಸಭೆ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬುಧವಾರ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರೇಖಾ
ಅವರು ಗೃಹಲಕ್ಷ್ಮಿ ಯೋಜನೆ, ಉದ್ಯೋಗಿನಿ ಯೋಜನೆ, ಮಾತೃವಂದನಾ ಯೋಜನೆ, ಗರ್ಭಿಣಿ ಮಹಿಳೆಯರಿಗೆ ಪೌಷ್ಠಿಕಾಂಶ
ಆಹಾರ ಹಾಗೂ ಮಹಿಳೆ ಮತ್ತು ಮಕ್ಕಳ ಆಹಾರ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ
ಶುಶ್ರೂಷಕಿ ಪ್ರಜ್ವಲಾ ಅವರು, ಆರೋಗ್ಯ ಇಲಾಖೆ ವಿವಿಧ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಮತ್ತು ಪಲ್ಸ್
ಪೊಲೀಯೊ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಕುಟುಂಬ ಸಾಂತ್ವನ ಕೇಂದ್ರ ತಲ್ಲೂರು ಇದರ ಆಪ್ತ ಸಮಾಲೋಚಕಿ
ಪೂರ್ಣಿಮಾ ಅವರು ಆಪ್ತ ಸಮಾಲೋಚನೆ ನಡೆಸಿ ಕಾನೂನು ನೆರವಿನ ಬಗ್ಗೆ ಮಾಹಿತಿ ನೀಡಿದರು.
ಗ್ರಾಪಂ ಉಪಾಧ್ಯಕ್ಷ ತಬ್ರೇಜ್, ಪಿಡಿಒ ರವಿ, ಕಾರ್ಯದರ್ಶಿ ಅನೂಪ್ ಶೇಟ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶೋಭಾ ಉಪಸ್ಥಿತರಿದ್ದರು. ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಸಂಘದ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.
ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!