spot_img
Friday, June 19, 2026
spot_img

ಬಾರಕೂರು ಕೋಟೆಕೇರಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮುಷ್ಟಿ ಕಾಣಿಕೆ ಸಮರ್ಪಣೆ, ಮನವಿಪತ್ರ ಬಿಡುಗಡೆ

ಬಾರಕೂರು: ಇತಿಹಾಸ ಪ್ರಸಿದ್ಧ ಬಾರ್ಕೂರು ಕೋಟೆಕೇರಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ಮುಷ್ಟಿ ಕಾಣಿಕೆ ಸಮರ್ಪಣೆ ಹಾಗೂ ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ಜೂನ್ 17ರ ಬುಧವಾರ ನಡೆಯಿತು.

ಬಾರಕೂರಿನ ಇತಿಹಾಸ ಪ್ರಸಿದ್ಧ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಈ ದೇವಸ್ಥಾನವನ್ನು ಪ್ರಸ್ತುತಃ ಕಾಲಮಾನಕ್ಕೆ ಅನುಗುಣವಾಗಿ ನೂತನ ಮಾದರಿಯಲ್ಲಿ ಜೀರ್ಣೋದ್ಧಾರಗೊಳಿಸಲು, ಸಂಕಲ್ಪಿಸಲಾಗಿದ್ದು, ಜೀರ್ಣೋದ್ದಾರ ಸಮಿತಿಯನ್ನು ರಚಿಸಿ, ಸಂಬಂಧಿತ ಜೀರ್ಣೋದ್ಧಾರ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಅದರ ಅಂಗವಾಗಿ ಸಹಸ್ರಾರು ಭಕ್ತರು ಮುಷ್ಟಿಕಾಣಿಕೆಯನ್ನು ಸಮರ್ಪಿಸಿದರು. ಧಾರ್ಮಿಕ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಕರಿಸುವ ಕುರಿತು ಮನವಿ ಪತ್ರವನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಸುಗ್ಗಿ ಸುಧಾಕರ ಶೆಟ್ಟಿಯವರು ವಹಿಸಿದ್ದರು.

ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಆನಂದ ಸಿ ಕುಂದರ್ ಶುಭ ಹಾರೈಸಿದರು.

ಬಾರ್ಕೂರು ಚರ್ಚಿನ ಧರ್ಮಗುರು ರೋನಾಲ್ಡ್ ಮಿರಾಂದ, ವಂಡಾರು ಶ್ರೀ ಕೃಷ್ಣಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಮಾಲಕ ಸಂಪತ್ ಕುಮಾರ್ ಶೆಟ್ಟಿ , ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಬಾರ್ಕೂರು ಶಾಂತಾರಾಮ ಶೆಟ್ಟಿ, ಗೌರವಾಧ್ಯಕ್ಷರಾದ ಆಕಾಶ್ ರಾಜ್ ಜೈನ್ ಹಾಗೂ ಉದ್ಯಮಿ ವಿಠಲ ಹೆಗ್ಡೆ ಬೆಳಗಾವಿ, ಬೆಂಗಳೂರಿನ ಹೋಟೆಲ್ ಉದ್ಯಮಿ ಸುಧಾಕರ ಸೂರಾಲು, ಉದ್ಯಮಿ ವಿಜಯ ಶೆಟ್ಟಿ ಹವರಾಲು, ಉಪಾಧ್ಯಕ್ಷರಾದ ಶ್ರೀನಿವಾಸ ಶೆಟ್ಟಿಗಾರ್ ರಂಗನಕೇರಿ, ಕೆ. ಚಂದ್ರಶೇಖರ ಶೆಟ್ಟಿ ಬಾರ್ಕೂರು, ಜ್ಯೋತಿಷಿ ರಮೇಶ್ ಭಟ್, ಏಕನಾಥೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಅಣ್ಣಯ್ಯ ಶೇರಿಗಾರ್ ಅಜ್ಜಿಮನೆ, ಉದ್ಯಮಿ ಮುನಿಯಾಲು ಉದಯಕುಮಾರ್ ಶೆಟ್ಟಿ, ದೇವಸ್ಥಾನದ ಮೊಕ್ತೇಸರ ಮಂಜುನಾಥ ರಾವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪತ್ರಕರ್ತರಾದ ಕೆ.ಸಿ ರಾಜೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು, ಸುಗ್ಗಿ ಸುಧಾಕರ ಶೆಟ್ಟಿ ಸ್ವಾಗತಿಸಿದರು, ದಾಮೋದರ ಶರ್ಮ ಕಾರ್ಯಕ್ರಮವನ್ನು ನಿರೂಪಿಸಿ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!