spot_img
Friday, June 19, 2026
spot_img

ಮಾರಣಕಟ್ಟೆಯಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿ ಬೀದಿನಾಟಕ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ) ಕುಂದಾಪುರ ತಾಲೂಕಿನ ಚಿತ್ತೂರು ವಲಯದ ಮಾರಣಕಟ್ಟೆ ಒಕ್ಕೂಟದ ಓಂಕಾರ ಜ್ಞಾನವಿಕಾಸ ಹಾಗೂ ಹೊಂಬೆಳಕು ಜ್ಞಾನವಿಕಾಸ ಕೇಂದ್ರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೀದಿನಾಟಕ ಕಾರ್ಯಕ್ರಮ ಉಪ್ಪಿನಕುದ್ರು ಪಂಚಗಂಗಾವಳಿ ಜ್ಞಾನವಿಕಾಸ ಕೇಂದ್ರದ ಸದಸ್ಯರು ಪ್ರಸ್ತುತ ಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾದ ಸದಾಶಿವ ಶೆಟ್ಟಿ ವಹಿಸಿದ್ದರು.

ಕುಂದಾಪುರ ತಾಲೂಕಿನ ಯೋಜನಾಧಿಕಾರಿ ಉಮೇಶ್ ಶೆಟ್ಟಿ ಎಚ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತದೆ. ಶಿಕ್ಷಣ, ಆರೋಗ್ಯ, ನೀರಿನ ಸದ್ಬಳಕೆ ಬಗ್ಗೆ, ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛತೆ ಮಾಡುವ ಬಗ್ಗೆ ಬೀದಿ ನಾಟಕ ಮಾಡುವ ಮೂಲಕ ಉತ್ತಮವಾಗಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ನಡೆಸುತ್ತಿದೆ ಎಂದರು.

ಚಿತ್ತೂರು ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಡಾ.ಅತುಲ್ ಕುಮಾರ್ ಶೆಟ್ಟಿ ಮಾತನಾಡಿ, ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಜರಗುವ ಅನೇಕ ಕಾರ್ಯಕ್ರಮಗಳಲ್ಲಿ ಬೀದಿ ನಾಟಕ ಕಾರ್ಯಕ್ರಮವು ಒಂದಾಗಿದೆ. ಇಂದಿನ ಆಧುನಿಕ ಯುಗದಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಕಲುಷಿತಗೊಂಡು ಮುಂದೆ ಎದುರಾಗಬಹುದಾದ ಸಂಕಷ್ಟದ ಬಗ್ಗೆ ಜಾಗೃತಿ ಹೊಂದಬೇಕು ಎಂದರು.

ಈ ಸಂದರ್ಭದಲ್ಲಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿ ರಘುರಾಮ್ ಶೆಟ್ಟಿ, ಜನಜಾಗೃತಿ ವೇದಿಕೆ ಸದಸ್ಯರಾದ ವೆಂಕಟರಮಣ ಆಚಾರ್ ಇಡೂರು ಕುಂಜ್ಞಾಡಿ, ಜನಜಾಗೃತಿ ವೇದಿಕೆ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಇಂಬು, .ನಮ್ಮ ಭೂಮಿಯ ಕಾರ್ಯಕರ್ತರಾದ ನರಸಿಂಹ ಗಾಣಿಗ, ಹಾಗೂ ಜ್ಞಾನವಿಕಾಸ ಕೇಂದ್ರದ ಸದಸ್ಯರು, ಸ್ವ ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಜ್ಞಾನವಿಕಾಸ ಸಮನ್ವಯಾದಿಕಾರಿ ರೇಣುಕಾ ಕೋಡಪದವು ಕಾರ್ಯಕ್ರಮ ನಿರ್ವಹಿಸಿದರು. ಸೇವಾ ಪ್ರತಿನಿಧಿ ಶೋಭಾ ಶೆಟ್ಟಿ, ವಸಂತಿ, ಗೀತಾ, ಮಂಜುನಾಥ, ಜ್ಞಾನವಿಕಾಸ ಕೇಂದ್ರ ಸದಸ್ಯರು, ಸ್ವ-ಸಹಾಯ ಸಂಘದ ಸದಸ್ಯರು ಕಾರ್ಯಕ್ರಮಕ್ಕೆ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!