spot_img
Friday, June 19, 2026
spot_img

ಎಸ್.ಐ.ಟಿ ತನಿಖಾ ವರದಿಯನ್ನು ಕೂಡಲೇ ಸಾರ್ವಜನಿಕವಾಗಿ ಬಿಡುಗಡೆ ಮಾಡುವಂತೆ ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಸರಕಾರಕ್ಕೆ ಆಗ್ರಹ

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಉಡುಪಿ ಜಿಲ್ಲೆ ಇದರ 2026-27ನೇ ಸಾಲಿನ ತ್ರೈಮಾಸಿಕ ಪ್ರಥಮ ಸಭೆಯು ಬ್ರಹ್ಮಗಿರಿಯ ಪ್ರಗತಿ ಸೌಧ ಸಭಾಂಗಣದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆಯ ಜಿಲ್ಲಾ ಸಂಘಟನಾ ಅಧ್ಯಕ್ಷರಾದ ನೀರೇ ಕೃಷ್ಣ ಶೆಟ್ಟಿಯವರು ವಹಿಸಿ ಮಾತನಾಡುತ್ತಾ, ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಬಗ್ಗೆ ಷಡ್ಯಂತ್ರ ನಡೆಸಲು ನೂರಾರು ಕೋಟಿ ರೂ.ಗಳ ಅವ್ಯವಹಾರವು ನಡೆದಿದೆ ಎನ್ನುವುದು ಆತಂಕಕಾರಿ ವಿಷಯ. ಷಡ್ಯಂತ್ರವನ್ನು ಸಂಚು ಮಾಡಿದವರಿಗೆ ಸೂಕ್ತ ಶಿಕ್ಷೆಯನ್ನು ವಿಧಿಸಬೇಕು ಜೊತೆಗೆ ಎಸ್.ಐ.ಟಿ ತನಿಖಾ ವರದಿಯನ್ನು ಕೂಡಲೇ ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕೆಂದು ಸರಕಾರಕ್ಕೆ ಆಗ್ರಹ ಮಾಡಿದರು.

ಸಭೆಯನ್ನು ಜನಜಾಗೃತಿ ವೇದಿಕೆಯ ಮಾಜಿ ರಾಜ್ಯಾಧ್ಯಕ್ಷರಾದ ದೇವದಾಸ್ ಹೆಬ್ಬಾರ್ ಉದ್ಘಾಟಿಸಿದರು. ಗತ ಸಭೆಯ ವರದಿಯನ್ನು ಜಿಲ್ಲಾ ವೇದಿಕೆಯ ಕಾರ್ಯದರ್ಶಿ ನಾಗರಾಜ್ ಶೆಟ್ಟಿ ಮಂಡಿಸಿದರು. ನೂತನವಾಗಿ ಆಯ್ಕೆಯಾದ ತಾಲೂಕು ವೇದಿಕೆ ಅಧ್ಯಕ್ಷರಾದ ರಾಜು ಪೂಜಾರಿ ಉಡುಪಿ, ವೃಷಭರಾಜ್ ಕಡಂಬ ಕಾರ್ಕಳ, ಪ್ರಸಾದ್ ಹೆಗ್ಡೆ ಬ್ರಹ್ಮಾವರ, ಸುಬ್ರಹ್ಮಣ್ಯ ಶೆಟ್ಟಿ ಕುಂದಾಪುರ, ಸತ್ಯೇಂದ್ರ ಪೈ ಕಾಪು, ವಾದಿರಾಜ ಶೆಟ್ಟಿ ಹೆಬ್ರಿ ಇವರನ್ನು ಅಭಿನಂದಿಸಲಾಯಿತು.

2026-27ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಮದ್ಯವರ್ಜನ ಶಿಬಿರ, ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ, ನವಜೀವನೋತ್ಸವ, ಅಕ್ಟೋಬರ್ 2 ಗಾಂಧೀ ಜಯಂತಿ ಕಾರ್ಯಕ್ರಮಗಳ ಸಮಗ್ರ ಅನುಷ್ಟಾನಗಳ ಬಗ್ಗೆ ಕರಾವಳಿ ಪ್ರಾದೇಶಿಕ ವಿಭಾಗದ ಗಣೇಶ್ ಆಚಾರ್ಯ ಮಾಹಿತಿ ನೀಡಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವೇದಿಕೆಯ ಸದಸ್ಯರಾದ ಗೀತಾಂಜಲಿ ಸುವರ್ಣ, ಸುಜಾತ ಸುವರ್ಣ, ಸುಧಾಕರ ಕರ್ಕೇರ, ಸುಲೇಖಾ ಶೆಟ್ಟಿ, ತಾರನಾಥ ಶೆಟ್ಟಿ ಇವರನ್ನು ಗೌರವಿಸಲಾಯಿತು.

ಮದ್ಯಮುಕ್ತ ಮೆಹಂದಿ ಕಾರ್ಯಕ್ರಮಗಳ ಬಗ್ಗೆ ಎಲ್ಲಾ ತಾಲೂಕುಗಳಲ್ಲಿ ಜಾಗೃತಿಯನ್ನು ಮೂಡಿಸಿ ಪ್ರಚಾರ ಮಾಡುವುದರ ಜೊತೆಗೆ ಮದ್ಯಮುಕ್ತ ಮೆಹಂದಿ ಕಾರ್ಯಕ್ರಮಗಳನ್ನು ನಡೆಸಿದವರನ್ನು ವೇದಿಕೆ ವತಿಯಿಂದ ಅಭಿನಂದಿಸುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಿಲ್ಲಾ ವೇದಿಕೆಗೆ ನೂತನ ಸದಸ್ಯರಾಗಿ ಅಪ್ಪಣ್ಣ ಹೆಗ್ಡೆಯವರ ಪುತ್ರರಾದ ರಾಮಕಿಶನ್ ಹೆಗ್ಡೆಯವರನ್ನು ಸೇರ್ಪಡೆಗೊಳಿಸಲಾಯಿತು. ಸಭೆಯಲ್ಲಿ ಎಲ್ಲಾ ತಾಲೂಕಿನ ಕಾರ್ಯದರ್ಶಿಗಳು ತ್ರೈಮಾಸಿಕ ಸಾಧನಾ ವರದಿಯನ್ನು ಮಂಡಿಸಿದರು.

ಉಡುಪಿ ಯೋಜನಾಧಿಕಾರಿ ಸುರೇಂದ್ರ ನಾಯ್ಕ ಸ್ವಾಗತಿಸಿ, ಬ್ರಹ್ಮಾವರ ಯೋಜನಾಧಿಕಾರಿ ರಮೇಶ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!