spot_img
Saturday, June 20, 2026
spot_img

ಕುಂದಾಪುರದಲ್ಲಿ ಖಾಸಗಿ ವಿದ್ಯುತ್ ಪರವಾನಗಿಗೆ ವಿರೋಧ: ಟಾಟಾ ಪವರ್ ಅರ್ಜಿ ರದ್ದತಿಗೆ ಶಾಸಕರಿಗೆ ಮನವಿ

 

ಕುಂದಾಪುರ, ಜೂನ್ 19: ಮೆಸ್ಕಾಂ ವ್ಯಾಪ್ತಿಯಲ್ಲಿ ಸಮಾನಾಂತರ ವಿದ್ಯುತ್ ವಿತರಣೆಗೆ ಟಾಟಾ ಪವರ್ ಕಾರ್ಪೊರೇಷನ್ ಲಿಮಿಟೆಡ್ ಸಲ್ಲಿಸಿರುವ ಅರ್ಜಿಯನ್ನು ರದ್ದುಪಡಿಸಬೇಕು ಹಾಗೂ ವಿದ್ಯುತ್ ಕ್ಷೇತ್ರದ ಖಾಸಗಿಕರಣವನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿ ಕರ್ನಾಟಕ ವಿದ್ಯುತ್ ಮಂಡಳಿಯ ನೌಕರರು ಮತ್ತು ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಶುಕ್ರವಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರಿಗೆ ಮನವಿ ಸಲ್ಲಿಸಿದರು.
ಶಾಸಕರ ಕಚೇರಿಗೆ ಭೇಟಿ ನೀಡಿದ ನೌಕರರ ನಿಯೋಗವು ವಿದ್ಯುಚ್ಛಕ್ತಿ ಕಾಯ್ದೆ 108ನೇ ಪರಿಚ್ಛೇದದ ಪ್ರಾವಧಾನ ಬಳಸಿ ರಾಜ್ಯ ಸರಕಾರವು ಟಾಟಾ ಪವರ್ ಅರ್ಜಿಯನ್ನು ರದ್ದುಪಡಿಸುವಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದೆ.
ರೈತರು, ಬಡವರು, ಮಧ್ಯಮ ವರ್ಗ, ಮಹಿಳೆಯರು, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ-ಪಂಗಡ ಹಾಗೂ ಗ್ರಾಮೀಣ ಗ್ರಾಹಕರ ಹಿತದೃಷ್ಟಿಯಿಂದ ಮತ್ತು ಮೆಸ್ಕಾಂ ನೌಕರರ ಪರವಾಗಿ ಸರಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.
ಶಾಸಕರು ಇದ್ದಕ್ಕೆ ಪೂರಕವಾಗಿ ಸ್ಪಂದಿಸಿ ಸಂಬAಧಪಟ್ಟ ಇಲಾಖೆಯ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!