spot_img
Tuesday, June 23, 2026
spot_img

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ, ತಾಲೂಕು ಕಾನೂನು ಸೇವೆಗಳ ಸಮಿತಿ ,
ಬಾರ್ ಅಸೋಸಿಯೆಷನ್ (ರಿ) ಕುಂದಾಪುರ, ಶಾಲಾ ಶಿಕ್ಷಣ ಇಲಾಖೆ ಕುಂದಾಪುರ ಇವರ ಸಂಯುಕ್ತ
ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಧೀಶರಾದ ಅಬ್ದುಲ್ ರಹೀಮ್ ಹುಸೇನ್
ಶೇಖ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಒತ್ತಡದ ಜೀವನದಲ್ಲಿ ಯೋಗಕ್ಕೆ ಹೆಚ್ಚಿನ ಮಹತ್ವ
ನೀಡಬೇಕಾಗಿದೆ. ಯೋಗದಿಂದ ದೈಹಿಕ ಬದಲಾವಣೆಗಿಂತಲೂ ಮುಖ್ಯವಾಗಿ ಆತ್ಮ ಶುದ್ಧಿಯಾಗುತ್ತದೆ.
ಆತ್ಮವನ್ನು ಪರಮಾತ್ಮನೊಂದಿಗೆ ಜೋಡಿಸಲು ಯೋಗ ಸಹಕಾರಿಯಾಗಿದೆ ಎಂದರು.
ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಧೀಶರು ಕುಂದಾಪುರ ಶ್ರೀನಿವಾಸ ಕೆ.ಆರ್. ಮಾತನಾಡಿ, ಇಂದಿನ ಒತ್ತಡದ ಜೀವನದಲ್ಲಿ ಪ್ರತಿಯೊಬ್ಬರಿಗೂ ಯೋಗ ಅತೀ ಅವಶ್ಯವಿದೆ. ಮಾನಸಿಕ ಒತ್ತಡ ನಿವಾರಣೆಗೆ ಮತ್ತು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ಯೋಗಾಭ್ಯಾಸ ಮಾಡಬೇಕು ಎಂದರು.
ಪ್ರಧಾನ ಸಿವಿಲ್ ಮತ್ತು ಎಮ್.ಎಫ್.ಸಿ ನ್ಯಾಯಧೀಶೆ ಮಂಜುಳಾ ಬಿ, ಮಂಜುನಾಥ ಬಿಜೂರ್,
ಮುಖ್ಯ ಶಿಕ್ಷಕರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಿಜೂರ್, ಸತ್ಯನಾರಾಯಣ ಜಿ. ತಾಲೂಕು
ದೈಹಿಕ ಶಿಕ್ಷಣಾಧಿಕಾರಿಗಳು ಕುಂದಾಪುರ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಸುಬ್ರಹ್ಮಣ್ಯ ಎಸ್, ಉಡುಪಿ
ಜಿಲ್ಲೆ PLV ತಿಲೋತ್ತಮ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರ ಸ್ವಾಗತಿಸಿ, ದೈಹಿಕ ಶಿಕ್ಷಣ
ಶಿಕ್ಷಕರಾದ ವಸಂತ್ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ನಾಗೇಂದ್ರ
ಕಾರ್ಯಕ್ರಮವನ್ನು ನಿರೂಪಿಸಿದರು.
ಸಭಾ ಕಾರ್ಯಕ್ರಮದ ನಂತರ ಎನ್.ಸಿ.ಸಿ ಸ್ಕೌಟ್ಸ್ ಮತ್ತು ಗೈಡ್ಸ್ ರವರಿಂದ ಯೋಗಾಭ್ಯಾಸ
ನಡೆಯಿತು. ಸಂಸ್ಥೆಯ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!