spot_img
Tuesday, June 23, 2026
spot_img

ಹಟ್ಟಿಯಂಗಡಿ ಶ್ರೀ ಸಿದ್ಧಿ ವಿನಾಯಕ ವಸತಿಶಾಲೆ : ಅಂತರಾಷ್ಟ್ರೀಯ ಯೋಗ ದಿನಾಚರಣೆ

 

‘ಅಂತರಾಷ್ಟ್ರೀಯ ಯೋಗ ದಿನ’ ವನ್ನು ಶ್ರೀಸಿದ್ಧಿವಿನಾಯಕ ವಸತಿಶಾಲೆ, ಹಟ್ಟಿಯಂಗಡಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ದಿನಾಂಕ ಜೂನ್ 20, 2026ರ ಶನಿವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲೆಯ ಶೈಕ್ಷಣಿಕ ಸಲಹೆಗಾರರಾದ ಸುಜಾತಾ ಸದಾರಾಮ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿಯವರಾದ ಹೇಮಮಾಲಿನಿ ಎಸ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲೆಯ ಶೈಕ್ಷಣಿಕ ಸಲಹೆಗಾರರಾದ ಸುಜಾತಾ ಸದಾರಾಮ್‌ರವರು ಯೋಗವು ಜಗತ್ತಿಗೆ ಭಾರತವು ನೀಡಿದ ಅಮೂಲ್ಯ ಕೊಡುಗೆ ಎನ್ನುತ್ತಾ ನಿರಂತರ ಯೋಗಾಭ್ಯಾಸದಿಂದ ವಿದ್ಯಾರ್ಥಿಗಳು ಏಕಾಗ್ರತೆಯನ್ನು ಉತ್ತಮ ಪಡಿಸಿಕೊಳ್ಳಬಹುದೆಂದರು. ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾದ್ಯಾಯಿನಿ ಹೇಮಾಮಾಲಿನಿ ಎಸ್ ರವರು ನಿಯಮಿತವಾಗಿ ಯೋಗಾಸನಗಳನ್ನು ಮಾಡುವ ರೂಢಿಯಿಂದ ಒತ್ತಡ ನಿವಾರಣೆ ಸಾಧ್ಯವೆಂದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ವಿಭಾಗ ಸಂಯೋಜಕರಾದ ದೀಪಿಕಾ ದೇವಾಡಿಗ ಹಾಗೂ ಶ್ರುತಿ ಅವರು ಯೋಗದ ಮಹತ್ವದ ಕುರಿತು ಮಾತನಾಡಿದರು. ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ಅದು ಮನಸ್ಸು, ದೇಹ ಮತ್ತು ಆತ್ಮದ ಸಮನ್ವಯವನ್ನು ಸಾಧಿಸುವ ಜೀವನ ಶೈಲಿಯಾಗಿದೆ ಎಂದು ತಿಳಿಸಿದರು. ಯೋಗವು ಮಾನಸಿಕ ಶಾಂತಿ, ಆರೋಗ್ಯಕರ ಜೀವನ ಹಾಗೂ ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಲು ಅತ್ಯಂತ ಸಹಾಯಕವಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸಹ ಶಿಕ್ಷಕಿ ಜ್ಯೋತಿಶೆಟ್ಟಿ ಇವರು ಯೋಗದ ಹಿನ್ನಲೆ, ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಯೋಗಾಸನಗಳು ನೀಡುವ ಪ್ರಯೋಜನಗಳ ಬಗ್ಗೆ ವಿವರಣೆ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹಲವಾರು ಯೋಗಾಸನಗಳು ಹಾಗೂ ಪ್ರಾಣಾಯಾಮಗಳನ್ನು ಪ್ರಾತ್ಯಕ್ಷಿಕೆ ಮೂಲಕ ಕಲಿಸಿದರು.
ವಿದ್ಯಾರ್ಥಿಗಳಾದ ಪ್ರಮೀಕ್ಷಾ, ಗಗನ್ ಮತ್ತು ಚಿರಾಯು ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!