spot_img
Tuesday, June 23, 2026
spot_img

ಶ್ರೀ ಅಯ್ಯಪ್ಪಯಕ್ಷ ಕಲಾ ಪ್ರತಿಷ್ಠಾನ ಮುಂಬಯಿ: ಕಲಾಭಿಮಾನಿಗಳ ಮನರಂಜಿಸಿದ ‘ಕಾಶಿ ತೀರ್ಥ’ಯಕ್ಷಗಾನ ಪ್ರದರ್ಶನ

 

ಮುಂಬಯಿ, ಜೂ.23 :ಮುಂಬಯಿ ಮಹಾನಗರದಲ್ಲಿ ಯಕ್ಷಗಾನ ಆಯೋಜಿಸಲು ಕಲಾವಿದರೊಂದಿಗೆ ಪ್ರೇಕ್ಷಕರು ಮುಖ್ಯ ಹಾಗೇ ದೇಣಿಗೆದಾರರ ಸಹಕಾರ ಕೂಡ ಬೇಕಾಗುತ್ತದೆ. ಅದರಲ್ಲೂ ಬಡಗುತಿಟ್ಟಿನ ಯಕ್ಷಗಾನವನ್ನು ಆಯೋಜಿಸಲು ಬಹಳ ಕಷ್ಟವಿದೆ. ನಮ್ಮ ಹವ್ಯಾಸಿ ಕಲಾವಿದರು ಇಷ್ಟೊಂದು ಸೊಗಸಾಗಿ ಯಕ್ಷಗಾನ ಪ್ರದರ್ಶನ ನೀಡಲು ಹಗಲಿರುಳು ಶ್ರಮಿಸಿದ್ದಾರೆ ಎಂದು ಶ್ರೀ ಅಯ್ಯಪ್ಪಯಕ್ಷ ಕಲಾ ಪ್ರತಿಷ್ಠಾನದ ಗೌರವಾಧ್ಯಕ್ಷ ರಾಜು ಮೆಂಡನ್ ವಂಡ್ಸೆ ಹೇಳಿದರು.
ಥಾಣೆ ಪಶ್ಚಿಮದಲ್ಲಿರುವ ನವೋದಯ ಕನ್ನಡ ಸಂಘದ ಸಭಾಗೃಹದಲ್ಲಿ ಜೂ. 21 ರಂದು ಜರಗಿದ ನಾರಾಯಣ ಶೆಟ್ಟಿ ನಂದ್ರೋಳ್ಳಿ ವಿರಚಿತ, ಸುರೇಶ ಶೆಟ್ಟಿ ನಂದ್ರೋಳ್ಳಿ ಪದ್ಯ ರಚಿಸಿರುವ ‘ಕಾಶಿ ತೀರ್ಥ’ ಎಂಬ ಯಕ್ಷಗಾನ ಪ್ರದರ್ಶನದ ಮಧ್ಯದಲ್ಲಿ ಜರಗಿದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, ಆಂಗ್ಲ ಮಾಧ್ಯಮದಲ್ಲಿ ಕಲಿಯುವ ಮಕ್ಕಳು ಕನ್ನಡದಲ್ಲಿ ನಿರರ್ಗಳವಾಗಿ ಸಂಭಾಷಣೆ ನೆಡೆಸಲು ಸಾಕಷ್ಟು ಪರಿಶ್ರಮ ಪಟ್ಟಿದ್ದಾರೆ. ಇದು ಅವರ ಬಹು ದೊಡ್ಡ ಸಾಧನೆ ಎಂದು ಹೇಳಲು ಸಂತೋಷವಾಗುತ್ತದೆ. ನಮ್ಮ ಸಂಸ್ಥೆ ಈಗಾಗಲೇ 14 ರ ಹರೆಯದಲ್ಲಿದೆ. ನಮ್ಮತಂಡದಲ್ಲಿ ಪ್ರತಿವರ್ಷ ಬದಲಾವಣೆ ಮಾಡುತ್ತಾ ಪ್ರತಿಯೊಬ್ಬರಿಗೂ 2 ವರ್ಷದ ಅಧ್ಯಕ್ಷ ಪದವಿ ನೀಡುತ್ತಾ ಬಂದಿದ್ದೇವೆ. ನಮ್ಮ ಸಂಸ್ಥೆಯಲ್ಲಿ ಯಾವುದೇ ಜಾತಿ ಮತದ ಭೇದವಿಲ್ಲದೆ ನಾವೆಲ್ಲರೂ ಒಂದೇ ತಾಯಿಯ ಮಕ್ಕಳಂತೆ ಕಾರ್ಯ ನಿರ್ವಹಿಸುತ್ತಿದ್ದೇವೆ. ಇನ್ನು ಮುಂಬರುವ ದಿನಗಳಲ್ಲಿ ಅಮೃತಾ ಶೆಟ್ಟಿಯವರ ನೇತೃತ್ವದಲ್ಲಿ ನಮ್ಮ 15ನೇ ವರ್ಷದ ಕಾರ್ಯಕ್ರಮವನ್ನು ಬಲು ವಿಜೃಂಭಣೆಯಿಂದ ಆಚರಿಸಲಿದ್ದೇವೆ. ಮುಂದೆ ಅಮೃತಾ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗುವ ಎಲ್ಲಾ ಕಾರ್ಯಕ್ರಮಗಳಿಗೂ ನಿಮ್ಮೆಲ್ಲರ ಸಹಕಾರ ನಿರಂತರವಾಗಿರಲಿ ಎಂದರು.
ಯಕ್ಷಗಾನ ಕಲಾವಿದನಾಗಿ ತಾಳಮದ್ದಳೆಯ ಅರ್ಥಗಾರಿಕೆ ಮತ್ತು ಕಾಶಿ ತೀರ್ಥ ಪ್ರಸಂಗ ಪದ್ಯ ರಚಿಸಿದ ಸುರೇಶ ಶೆಟ್ಟಿ ನಂದ್ರೋಳಿಯವರನ್ನು ವೇದಿಕೆಯ ಗಣ್ಯರು ಶಾಲು ಹೊದೆಸಿ ಫಲಪುಷ್ಪ ಮತ್ತು ಸ್ಮರಣಿಕೆ ನೀಡಿ ಸಮ್ಮಾನಿಸಿದರು.
ಮುಖ್ಯ ಅತಿಥಿ ಬಾಂಬೆ ಬಂಟ್ಸ್ ಅಸೋಷಿಯೇಷನ್ ಜೂಹಿನಗರ್ ಇದರ ಮಾಜಿ ಅಧ್ಯಕ್ಷ ಸಿ.ಎ. ಸುರೇಂದ್ರ ಶೆಟ್ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಬಾಂಬೆ ಬಂಟ್ಸ್ ಅಸೋಷಿಯೇಷನ್ ಮಾಜಿ ಅಧ್ಯಕ್ಷ ಶ್ಯಾಮಎನ್. ಶೆಟ್ಟಿ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ ಇದರ ಮಾಜಿ ಅಧ್ಯಕ್ಷ ಮಹಾಬಲ ಕುಂದರ್, ಚಾರ್ಟೆಡ್ ಅಕೌಂಟೆಂಟ್  ಯಶ್ವಂತ್ ಕರ್ಕೇರ, ಥಾಣೆ ನವೋದಯ ಕನ್ನಡ ಸಂಘದ ಅಧ್ಯಕ್ಷ ದಯಾನಂದ ಶೆಟ್ಟಿ, ಉದ್ಯಮಿ ಹಾಗೂ ಕಲಾಪೋಷಕ ನಿತೀಶ್ ಶೆಟ್ಟಿ ಸಂದರ್ಭೋಚಿತವಾಗಿ ಮಾತನಾಡಿ ಪ್ರತಿಷ್ಠಾನದ ಕಾರ್ಯಕ್ರಮಗಳಿಗೆ ಶುಭಕೋರಿದರು. ವೇದಿಕೆಯಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಜಯರಾಮ್ ಶೆಟ್ಟಿ ಇಡೂರು ಉಪಸ್ಥಿತರಿದ್ದರು.
ವೇದಿಕೆಯಲ್ಲಿರುವ ಗಣ್ಯರಿಗೆ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ರಾಘವೇಂದ್ರ ಬಗ್ವಾಡಿ ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಪುಷ್ಟಗುಚ್ಚ ನೀಡಿ ಸ್ವಾಗತಿಸಿದರು. ಹಿಮ್ಮೇಳದಲ್ಲಿ ಸಹಕರಿಸಿದ ಹಾಲಾಡಿ ಮೇಳದ ಪ್ರಧಾನ ಭಾಗವತ ಗಣೇಶ ಬಿಲ್ಲಾಡಿ, ಚಂಡೆ ವಾದಕ ಶ್ರೀನಿವಾಸ ಪ್ರಭು, ಮದ್ದಳೆಗಾರ ವಿಶ್ವಂಭರ ಅಲ್ಸೆ, ವೇಷ-ಭೂಷಣದ ಗಣೇಶ ಆಚಾರ್ಯ ಸಾಲಿಗ್ರಾಮ, ಕಲಾವಿದ ರಾಜೇಶ ಹೈಕಾಡಿ ಅವರನ್ನು ವೇದಿಕೆಯ ಗಣ್ಯರು ಗೌರವಿಸಿದರು.
ಅಮೃತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಶ್ರೀ ಅಯ್ಯಪ್ಪಯಕ್ಷ ಕಲಾ ಪ್ರತಿಷ್ಠಾನದ ಸಂಚಾಲಕ ಮಹೇಂದ್ರ ಶೆಟ್ಟಿ ನಂದ್ರೋಳಿ ಸ್ವಾಗತಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!