spot_img
Wednesday, June 24, 2026
spot_img

ಸದಾ ಯೋಗಾಭ್ಯಾಸದಿಂದ ಸ್ವಸ್ಥಸಮಾಜ ನಿರ್ಮಾಣ ಸಾಧ್ಯ – ಡಾ.ಸೋನಿ ಡಿಕೋಸ್ಟ್

 

ಶ್ರೀ ಸಿದ್ಧಿವಿನಾಯಕ ವಸತಿಶಾಲೆ, ಹಟ್ಟಿಯಂಗಡಿಯಲ್ಲಿ ಅಂತಾರಾಷ್ಟ್ರೀಯ ಯೋಗದಿನದ ಅಂಗವಾಗಿ ವಿಜಯ ಕರ್ನಾಟಕ ಪತ್ರಿಕೆಯ ಸಹಯೋಗದೊಂದಿಗೆ ದಿನಾಂಕ 21-06-2026 ರಂದು ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಡಾ. ಸೋನಿ ಡಿಕೋಸ್ಟ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ “ಅಂತಾರಾಷ್ಟ್ರೀಯ ಯೋಗದಿನದಂದು ಮಾತ್ರ ಯೋಗಾಭ್ಯಾಸ ಮಾಡದೆ ನಿತ್ಯವೂ ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸ್ವಸ್ಥಸಮಾಜ ನಿರ್ಮಾಣದಲ್ಲಿ ಮಾಧ್ಯಮದ ಪಾತ್ರ ದೊಡ್ಡದು. ಶ್ರೀ ಸಿದ್ಧಿವಿನಾಯಕ ವಸತಿಶಾಲೆಯಲ್ಲಿ ನಡೆದ ಯೋಗದಿನಾಚರಣೆ ಅರ್ಥಪೂರ್ಣ” ಎಂದರು.
ಕೋಟೇಶ್ವರ ಚಿರಂತನ ಎಜುಕೇಶನಲ್ ಟ್ರಸ್ಟ್ ಸಂಸ್ಥಾಪಕಿ ಡಾ. ಚಿಂತನಾ ರಾಜೇಶ್ ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, “ಈ ಭೂಮಿ ಒಂದು ಬ್ಯೂಟಿಫುಲ್ ಕ್ಯಾಂಪಸ್. ಇದಕ್ಕೆ ಅನ್ವರ್ಥಕ ಎಂಬಂತೆ ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಇದೆ. ಮಕ್ಕಳು, ಹಿರಿಯರು ಇಂದು ಸಹಜ ಒತ್ತಡದಿಂದ ನಲುಗುತ್ತಿದ್ದಾರೆ. ನಿಯಮಿತ ಯೋಗಾಭ್ಯಾಸದಿಂದ ನೆಮ್ಮದಿಯಿಂದ ಬದುಕಲು ಸಾಧ್ಯವಿದೆ.” ಎಂದರು.
ಯೋಗಬಂಧು ಸಂಸ್ಥೆಯ ಯೋಗ ಶಿಕ್ಷಕಿ ಮೂಕಾಂಬಿಕಾ ಉಡುಪ ಯೋಗಾಸನಗಳನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ “ಅಂತಾರಾಷ್ಟ್ರೀಯ ಯೋಗದಿನಾಚರಣೆ ನಡೆಸಿಕೊಂಡು ಬರುತ್ತಿರುವುದು ನಮಗೆ ಹೆಮ್ಮೆಯ ವಿಚಾರ.” ಎನ್ನುತ್ತಾ ಅತಿಥಿಗಳಿಗೆ ಗೌರವಾರ್ಪಣೆ ನಡೆಸಿದರು.
ಕುಮಾರಿ ತನುಶ್ರೀ ಕಾರ್ಯಕ್ರಮವನ್ನು ನಿರ್ವಹಿಸಿದರು. ವಿದ್ಯಾರ್ಥಿ ವಿನಾಯಕ ಸ್ವಾಗತಿಸಿದರು. ವಿದ್ಯಾರ್ಥಿ ಹರೀಶ್ ಧನ್ಯವಾದ ಸಮರ್ಪಿಸಿದರು. ಈ ಸಂದರ್ಭದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಉಪಾಧ್ಯಕ್ಷರು ಮತ್ತು ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿಗಳಾದ ವೇದಮೂರ್ತಿ ಹೆಚ್. ಬಾಲಚಂದ್ರ ಭಟ್ಟರು, ಶಾಲಾ ಆಡಳಿತಾಧಿಕಾರಿ ಶ್ರೀಮತಿ ವೀಣಾ ರಶ್ಮಿ ಎಮ್, ಶಾಲಾ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ, ಶೈಕ್ಷಣಿಕ ಸಲಹೆಗಾರ್ತಿ ಸುಜಾತಾ ಸದಾರಾಮ್, ಶೈಕ್ಷಣಿಕ ಸಂಯೋಜಕ ಶ್ರೀಮಧು ಕೆ. ಎಲ್, ದೈಹಿಕಶಿಕ್ಷಕರಾದ ಕೃಷ್ಣ ಹುಲ್ಲಾಳ, ಲತಾ ಗೌಡ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!