spot_img
Wednesday, June 24, 2026
spot_img

ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ರವಿಪ್ರಸಾದ ಹೆಗ್ಡೆ

ಮೂಡುಬಿದಿರೆ: ಯುವಜನರು ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿತ್ವ ಮತ್ತು ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ. ರವಿಪ್ರಸಾದ ಹೆಗ್ಡೆ ಹೇಳಿದರು.
ಕೇಂದ್ರ ಸರ್ಕಾರದ ‘ನಶಾಮುಕ್ತ ಭಾರತ್ ಅಭಿಯಾನ’ ಅಂಗವಾಗಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಮಾದಕ ವಸ್ತು ನಿಯಂತ್ರಣ ಸಮಿತಿ ವತಿಯಿಂದ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು ವ್ಯಸನಮುಕ್ತ ಜೀವನ’ ಕುರಿತ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಮಾದಕ ವ್ಯಸನವು ಹೊಸ ಸಮಸ್ಯೆಯಲ್ಲ. ಪ್ರಾಚೀನ ಕಾಲದಿಂದಲೂ ವಿವಿಧ ರೂಪಗಳಲ್ಲಿ ಸಮಾಜವನ್ನು ಕಾಡುತ್ತಲೇ ಬಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಅದರ ಸ್ವರೂಪ ಮತ್ತಷ್ಟು ಅಪಾಯಕಾರಿಯಾಗಿದ್ದು, ಯುವಜನರನ್ನು ಹೆಚ್ಚು ಸೆಳೆಯುತ್ತಿದೆ.
ಮದ್ಯ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮಸ್ಯೆಗಳು ಮಾತ್ರವಲ್ಲದೆ ಕುಟುಂಬ ಕಲಹ, ರಸ್ತೆ ಅಪಘಾತ, ಹಿಂಸಾಚಾರ ಮತ್ತು ಅಪರಾಧ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಯಾರೂ ವ್ಯಸನಿಯಾಗಬೇಕೆಂಬ ಉದ್ದೇಶದಿಂದ ಮಾದಕ ವಸ್ತುಗಳನ್ನು ಸೇವಿಸಲು ಆರಂಭಿಸುವುದಿಲ್ಲ. ಆದರೆ ಒಂದು ಬಾರಿ ಅದರ ದಾಸರಾದರೆ ಅದರಿಂದ ಹೊರಬರುವುದು ಬಹಳ ಕಷ್ಟವಾಗುತ್ತದೆ. ಆದ್ದರಿಂದ ವ್ಯಸನದ ಬಗ್ಗೆ ಕುತೂಹಲವೂ ಬೇಡ, ಪ್ರಯೋಗವೂ ಬೇಡ,” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್ ವಹಿಸಿದ್ದರು.
ಕಾರ್ಯಕ್ರಮದ ಅಂಗವಾಗಿ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ನಶಾಮುಕ್ತ ಭಾರತ್ ಪ್ರತಿಜ್ಞೆ ಬೋಧಿಸಿದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲೆ ಝಾನ್ಸಿ ಪಿ.ಎನ್., ಕಾರ್ಯಕ್ರಮ ಸಂಯೋಜಕ ಟಿ.ಎ.ಎನ್. ಖಂಡಿಗೆ ಉಪಸ್ಥಿತರಿದ್ದರು. ಜೇಸನ್ ಕ್ಯಾಸ್ಟಿಲಿನೋ ಕಾರ್ಯಕ್ರಮ ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!