spot_img
Friday, June 26, 2026
spot_img

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಎಸ್. ಜನಾರ್ದನ ಮರವಂತೆ ಅವರಿಗೆ ನುಡಿನಮನ

ಕುಂದಾಪುರ : ಹಿರಿಯ ಪತ್ರಕರ್ತ, ಪಂಚಾಯತ್ ರಾಜ್ ತಜ್ಞ ಎಸ್.ಜನಾರ್ದನ ಮರವಂತೆ ಅವರಿಗೆ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಕಚೇರಿಯಲ್ಲಿ ಶುಕ್ರವಾರ ಶ್ರದ್ದಾಂಜಲಿ ಸಭೆ ಹಾಗೂ ನುಡಿ ನಮನ ಕಾರ್ಯಕ್ರಮ ನಡೆಯಿತು.

ಎಸ್.ಜನಾರ್ದನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಮಾತನಾಡಿ, ಜನಾರ್ದನ ಮರವಂತೆ ಅವರು ನಮ್ಮ ಕುಂದಾಪುರ ಸಂಘದ ಹಿರಿಯ ಸದಸ್ಯರಾಗಿದ್ದು, ನಮಗೆ ಎಲ್ಲ ರೀತಿಯಿಂದಲೂ ಮಾರ್ಗದರ್ಶನ ನೀಡುತ್ತಿದ್ದರು. ಅನೇಕ ವಿಷಯಗಳಲ್ಲಿ ಪರಿಣತಿಯನ್ನು ಪಡೆದಿದ್ದರು ಎಂದರು.
ಸಂಘದ ಪದಾಧಿಕಾರಿಗಳು, ಸದಸ್ಯರು ನುಡಿನಮನ ಸಲ್ಲಿಸಿದರು.

ಜಿಲ್ಲಾ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯ ಚಂದ್ರಮ ತಲ್ಲೂರು, ತಾಲೂಕು ಸಂಘದ ಕೋಶಾಧಿಕಾರಿ ಶ್ರೀಕಾಂತ್ ಹೆಮ್ಮಾಡಿ, ಪದಾಧಿಕಾರಿಗಳು, ಸದಸ್ಯರು, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಸಂಘದ ಗೌರವ ಕಾರ್ಯದರ್ಶಿ ಅಕ್ಷತಾ ಗಿರೀಶ್, ಸೋಮಶೇಖರ ಶೆಟ್ಟಿ ಹಂದಕುಂದ ಉಪಸ್ಥಿತರಿದ್ದರು.

ಜಿಲ್ಲಾ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯ ರಾಘವೇಂದ್ರ ಪೈ ಗಂಗೊಳ್ಳಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!