spot_img
Friday, September 25, 2026
spot_img

ಕಲಿತ ಶಾಲೆಯನ್ನು ಮರೆಯಬೇಡಿ-ಕೃಷ್ಣಮೂರ್ತಿ ಮಂಜರು | ವಂಡ್ಸೆ ಶಾಲೆಯ ವಿದ್ಯಾರ್ಥಿಗಳಿಗೆ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಮವಸ್ತ್ರ, ನೋಟ್ ಪುಸ್ತಕ, ಐಡಿ ಕಾರ್ಡು, ಬೇಲ್ಟ್ ವಿತರಣೆ

ಕುಂದಾಪುರ, ಜೂ.27: ಇದು ಶತಮಾನ ಕಂಡ ಶಾಲೆ. ಸಾವಿರಾರು ಮಂದಿ ಓದಿ ಉನ್ನತ ಮಟ್ಟಕ್ಕೆ ಬಂದಿದ್ದಾರೆ. ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ಏಕಾಗ್ರತೆಯಿಂದ ವ್ಯಾಸಂಗ ಮಾಡಿ ಶಾಲೆಗೆ ಕೀರ್ತಿ ತನ್ನಿ. ವಿದ್ಯಾರ್ಥಿಗಳು ಶಿಕ್ಷಣದ ಬಳಿಕ ಉನ್ನತ ಸ್ಥಾನಕ್ಕೇರಿದ ಮೇಲೆ ಕಲಿತ ಶಾಲೆಯನ್ನು ಮರೆಯಬಾರದು. ಶಾಲೆಯೊಂದಿಗೆ ನಿರಂತರ ಸಂಪರ್ಕ ಇರಿಸಿಕೊಳ್ಳಿ ಎಂದು ಹೈದರಬಾದ್ ಉದ್ಯಮಿ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಹೇಳಿದರು.

ಅವರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಟ್ರಸ್ಟ್ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಕೊಡಮಾಡಿದ ಉಚಿತ ನೋಟ್ಸ್ ಪುಸ್ತಕ, ಕಲಿಕಾ ಪುಸ್ತಕ, ಸಮವಸ್ತ್ರ, ಐಡಿ ಕಾರ್ಡ್, ಬೇಲ್ಟ್ ವಿತರಿಸಿ ಮಾತನಾಡಿದರು.

ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ ಮಾತನಾಡಿ, ಕೃಷ್ಣಮೂರ್ತಿ ಮಂಜರು ಪ್ರತಿವರ್ಷ ೨ಲಕ್ಷ ರೂಪಾಯಿಗೂ ಹೆಚ್ಚು ಮೊತ್ತದ ಸಮವಸ್ತ್ರ, ಪುಸ್ತಕ ಹಾಗೂ ಕಲಿಕಾ ಪೂರಕ ಪರಿಕರಗಳ ಸೌಲಭ್ಯಗಳನ್ನು ಒದಗಿಸುತ್ತಾ ಬಂದಿದ್ದಾರೆ. ಈ ಶಾಲೆಯಲ್ಲಿ ಆಂಗ್ಲ ಮಾಧ್ಯಮ ವಿಭಾಗ ಆರಂಭವಾಗಿ ೧೧ ವರ್ಷ ಆಗುತ್ತಿದ್ದು, ಮೊದಲ ತಂಡ ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದು, ೬೦೦ಕ್ಕೂ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ್ದಾರೆ. ಇದು ಇಲ್ಲಿನ ಪ್ರಾಥಮಿಕ ಶಿಕ್ಷಣದ ಗುಣಮಟ್ಟ ಸೂಚಿಸುತ್ತದೆ. ಈ ಬಾರಿ ದಾಖಲಾತಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಿರುವುದು ಸಂತೋಷದ ವಿಚಾರ ಎಂದರು.

ಎಸ್.ಡಿ.ಎಂ.ಸಿ ಅಧ್ಯಕ್ಷೆ ಡಾ.ಪೂರ್ಣಿಮಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ವಂಡಬಳ್ಳಿ ಜಯರಾಮ ಶೆಟ್ಟಿ, ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಕೋಶಾಧಿಕಾರಿ ಜಿ.ಶ್ರೀಧರ್ ಶೆಟ್ಟಿ ಶುಭ ಹಾರೈಸಿದರು.

ಎಸ್.ಡಿ.ಎಂ.ಸಿ ಉಪಾಧ್ಯಕ್ಷ ನಾಗೇಂದ್ರ ಉಡುಪ, ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಪ್ರತಾಪಕುಮಾರ ಶೆಟ್ಟಿ ವಂಡ್ಸೆ, ಕರ್ಕುಂಜೆ ಸಮೂಹ ಸಂಪನ್ಮೂಲ ವ್ಯಕ್ತಿ ರವಿಚಂದ್ರ ಉಪಸ್ಥಿತರಿದ್ದರು.

ಪ್ರಭಾರ ಮುಖ್ಯೋಪಾಧ್ಯಾಯರಾದ ಸೋಮರಾಯ ಜನ್ನು ಸ್ವಾಗತಿಸಿದರು. ಶಿಕ್ಷಕರಾದ ಸದಾಶಿವ ಕೆಂಚನೂರು ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕರಾದ ಸುಧಾಕರ ಮರಕಾಲ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!