spot_img
Tuesday, June 30, 2026
spot_img

ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸಿದ ಎಮ್.ನಾಗರಾಜ್ ಶೆಟ್ಟಿ ಅವರಿಗೆ ಸನ್ಮಾನ 

ಬೈಂದೂರು: ಕ್ಷೇತ್ರ ಸಮನ್ವಯ ಕೇಂದ್ರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಇಲ್ಲಿ ಸುಮಾರು ಆರು ವರ್ಷಗಳ ಕಾಲ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ವಂಡ್ಸೆ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿ ಈಗ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿ ಸ.ಹಿ.ಪ್ರಾಶಾಲೆ ಸೆಳ್ಕೋಡು, ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಮ್.ನಾಗರಾಜ್ ಶೆಟ್ಟಿಯವರನ್ನು ಕ್ಷೇತ್ರ ಸಮನ್ವಯ ಕೇಂದ್ರ ಬೈಂದೂರು ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಿಯೋಜಿತ ಸಿ.ಆರ್.ಪಿಯಾಗಿ ಕಾರ್ಯ ನಿರ್ವಹಿಸಿದ ಚಂದ್ರ ನಾರಾಯಣ ಬಿಲ್ಲವ ಪಿ.ಎಂ.ಶ್ರೀ ಶಿರೂರು ಮತ್ತು ಶ್ರೀಮತಿ ಲಕ್ಷ್ಮೀ ಸ.ಹಿ.ಪ್ರಾ ಶಾಲೆ ಅರೆಶಿರೂರು ಇವರನ್ನು ಸನ್ಮಾನಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಪ್ರದೀಪ ಕುಮಾರ್, ಪತ್ರಾಂಕಿತ ವ್ಯವಸ್ಥಾಪಕ ಅರುಣೇಶ್, ಅಧೀಕ್ಷಕ ಮನೋರಾಜ್ ಶೆಟ್ಟಿ ಉಪಸ್ಥಿತರಿದ್ದರು.

ಬಿ.ಐ.ಆರ್.ಟಿ ನಾಗರತ್ನ ಪ್ರಾರ್ಥಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರಾಜೇಶ್ ಸ್ವಾಗತಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜುನಾಥ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ಶಿರೂರು ಸಿ.ಆರ್.ಪಿ ಗಣೇಶ್ ಪೂಜಾರಿ ಅನಿಸಿಕೆಯನ್ನು ಹಂಚಿಕೊಂಡರು. ಕಂಬದಕೋಣೆ ಸಿ.ಆರ್.ಪಿ ರಾಮನಾಥ ಮೇಸ್ತ ವಂದಿಸಿದರು. ಈ ಸಂದರ್ಭದಲ್ಲಿ ಬೈಂದೂರು ವಲಯದ ಎಲ್ಲಾ ಸಮೂಹ ಸಂಪನ್ಮೂಲ ವ್ಯಕ್ತಿಗಳು, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು ಹಾಗೂ ಕಚೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!